ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐ.ಸಿ.ಎ.ಐ. ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಶ್ರವಣ್ ಶೆಟ್ಟಿ, ಅರುಣ್ ಶೆಟ್ಟಿ, ಮತ್ತು ಅರುಣ್ ಕುಮಾರ್ ಉತ್ತೀರ್ಣರಾಗಿದ್ದಾರೆ.
ಅವರ ಸಾಧನೆಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಸಂಸ್ಥೆಯ ಪರವಾಗಿ ಅಭಿನಂದಿಸಿದ್ದಾರೆ.










