Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಪೂರ್ವಭಾವಿ ಸಭೆ
    ಉಡುಪಿ ಜಿಲ್ಲೆ

    ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಪೂರ್ವಭಾವಿ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜನವರಿ 25 ರಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಇದೆ ಜನವರಿ 25 ರಂದು ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

    ಖ್ಯಾತ ಉಪನ್ಯಾಸಕರಿಂದ ಮತದಾರರ ದಿನಾಚರಣೆ ಕುರಿತು ಉಪನ್ಯಾಸ ಸಹ ನಡೆಯಲಿದ್ದು, ಯುವ ಮತದಾರರಿಗೆ ಹೊಸ ಎಪಿಕ್ ಕಾರ್ಡ್ಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು ಎಂದ ಅವರು, ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದರು. 

    ಕಾರ್ಯಕ್ರಮದಲ್ಲಿ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ, ಫ್ಲೈಯಿಂಗ್ ಸ್ಕ್ವಾಡ್‌ಗಳಿಗೆ, ಸೆಕ್ಟರ್ ಅಧಿಕಾರಿಗಳು ಹಾಗೂ ಇ.ಎಲ್.ಸಿ ಗಳಿಗೆ ಅಭಿನಂದನೆಯನ್ನು ಸಲ್ಲಿಸಲಾಗುವುದು ಎಂದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್‌ಪಿ ಸಿದ್ಧಲಿಂಗಪ್ಪ, ಸಹಾಯಕ ಕಮಿಷನರ್ ಮಹೇಶ್ಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಡಯಟ್ ನ ಹಿರಿಯ ಉಪನ್ಯಾಸಕ ಡಾ. ಅಶೋಕ್ ಕಾಮತ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    19 − twelve =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.