Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಅಂತಿಮ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ ಮಾತನಾಡಿದರು.

    ಜಿಲ್ಲೆಯ ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,17,890 ಪುರುಷರು, 1,22,914 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,40,806 ಮತದಾರರು, ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,01,959 ಪುರುಷರು, 1,10,025 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,11,986 ಮತದಾರರು, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,06,782 ಪುರುಷರು, 1,14,839 ಮಹಿಳೆಯರು ಹಾಗೂ 3 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,21,624, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 92,598 ಪುರುಷರು, 1,00583 ಮಹಿಳೆಯರು ಹಾಗೂ 4 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 1,93,185 ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 93,003 ಪುರುಷರು, 1,00,685 ಮಹಿಳೆಯರು ಸೇರಿದಂತೆ ಒಟ್ಟು 1,93,688 ಒಟ್ಟಾರೆ ಜಿಲ್ಲೆಯಲ್ಲಿ 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ 10,61,289 ಮತದಾರರಿರುತ್ತಾರೆ.

    ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ನಮೂನೆ -6 ರಲ್ಲಿ 3,998, ನಮೂನೆ-6 ಎ ರಲ್ಲಿ 1, ನಮೂನೆ-8 ರಲ್ಲಿ 1288 ಸೇರಿದಂತೆ ಒಟ್ಟು  5287 ಜನರು ಹೊಸದಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿ, 5286 ಯುವ ಮತದಾರರು ಹೊಸದಾಗಿ ನೋಂದಣಿಯಾಗಿರುತ್ತಾರೆ. ನಮೂನೆ-7 ರಲ್ಲಿ 7,398 ಅರ್ಜಿಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಹಾಗೂ ನಮೂನೆ-8 ರಲ್ಲಿ ತಿದ್ದುಪಡಿಗಾಗಿ 5499 ಜನರಿಂದ ಅರ್ಜಿಗಳು ಸಲ್ಲಿಕೆಯಾದರೆ, 7398 ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. 5499 ಮತದಾರರ ಹೆಸರನ್ನು ತಿದ್ದುಪಡಿ ಮಾಡಲಾಗಿದೆ ಎಂದರು.

    ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿಯನ್ನು ಸಾರ್ವಜನಿಕರು ಪಡೆಯಲು ಅನುಕೂಲವಾಗುವಂತೆ ವೋಟರ್ ಹೆಲ್ಪ್ಲೈನ್ ನಂಬರ್ 1950 ಇದ್ದು, ಸಾರ್ವಜನಿಕರು ಈಗಾಗಲೇ ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ಇದೇ  ಜನವರಿ 25 ರಂದು ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ ಎಂದ ಅವರು, ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

    ಇದೇ ಸಂದರ್ಭದಲ್ಲಿ ಜಿಲ್ಲೆಯ ಕರಡು ಮತದಾರರ ಪಟ್ಟಿ ಹಾಗೂ ಅವುಗಳ ಸಿ.ಡಿ ಯನ್ನು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು. 

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ವಾರ್ತಾಧಿಕಾರಿ ಮಂಜುನಾಥ್ ಬಿ, ಬಿ.ಜೆ.ಪಿಯ ಚಂದ್ರಶೇಖರ ಪ್ರಭು, ಕಾಂಗ್ರೇಸ್‌ನ ಹಬೀಬ್ ಅಲಿ, ಜೆ.ಡಿ.ಎಸ್‌ನ ಜಯರಾಂ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.                                                                                                                                                                                                                                                

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    three × three =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.