Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರಣ್ಯ ಶಾಲೆ: ವಿದ್ಯಾರ್ಥಿನಿ ಚಿಕಿತ್ಸೆಗೆ 3 ಲಕ್ಷ ರೂ. ಸಹಾಯಹಸ್ತ ವಿತರಣೆ
    ಊರ್ಮನೆ ಸಮಾಚಾರ

    ವಿದ್ಯಾರಣ್ಯ ಶಾಲೆ: ವಿದ್ಯಾರ್ಥಿನಿ ಚಿಕಿತ್ಸೆಗೆ 3 ಲಕ್ಷ ರೂ. ಸಹಾಯಹಸ್ತ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಅವಿಭಕ್ತ ಕುಟುಂಬ ವ್ಯವಸ್ಥೆಯು ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯ ಭಾಗವಾಗಿದೆ. ಈ ವ್ಯವಸ್ಥೆಯಲ್ಲಿ ಕುಟುಂಬದ ಸದಸ್ಯರಲ್ಲಿ ನಾವು ನಮ್ಮವರು ಎಂಬ ಭಾವನೆ ಮೂಡಿ ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಸಹಕಾರ ಮನೋಭಾವದಿಂದ ಜೀವನ ಸಾಗಿಸುತ್ತಾರೆ. ಇದು ಉತ್ತಮ ಸಮಾಜ ಮುನ್ನಡೆಗೆ ಸಹಾಯವಾಗುತ್ತದೆ. ಇಲ್ಲಿ ಯಾರಿಗಾದರೂ ಸಮಸ್ಯೆ ಎದುರಾದರೇ ಆಡಳಿತ ಮಂಡಳಿ ಮತ್ತು ಎಲ್ಲರೂ ಜೊತೆಗೆ ನಿಂತು ಸಹಕರಿಸುತ್ತಾರೆ ಎಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. 

    Click Here

    Call us

    Click Here

    ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ತ್ರಿಷಿಕಾಳ ಹೃದಯ ಶಸ್ತ್ರ ಚಿಕಿತ್ಸೆಗೆ ಶಾಲಾ ಆಡಳಿತ ಮಂಡಳಿ, ಪೋಷಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ನೀಡಿದ  ದೇಣಿಗೆ ಸಹಾಯಧನ ಒಟ್ಟು 3,01,465 ರೂಪಾಯಿಗಳನ್ನು ಬಾಲಕಿಯ ತಾಯಿಗೆ ಹಸ್ತಾಂತರಿಸಿ ಮಾತನಾಡಿದರು.

    ಶಾಲೆಯೂ ಕೂಡ ಒಂದು ತುಂಬು ಕುಟುಂಬಕ್ಕೆ ಉದಾಹರಣೆಯಾಗಿದ್ದು, ಇಲ್ಲಿ ಮಕ್ಕಳು, ಪೋಷಕರು,  ಶಿಕ್ಷಕರು, ಆಡಳಿತ ಮಂಡಳಿ, ಬೋಧಕೇತರ ಸಿಬ್ಬಂದಿಗಳು ಇಡೀ ಕುಟುಂಬದ ಸದಸ್ಯರಾಗಿದ್ದಾರೆ. ಅಂತೆಯೇ ನಮ್ಮ ಸಂಸ್ಥೆಯೂ ಹಿಂದಿನಿಂದಲೂ ಈ ಸಹಕಾರ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ರೀತಿ ಸಹಕಾರ ಮತ್ತು ಹೊಂದಾಣಿಕೆಯಿಂದ ಸಂಸ್ಥೆಗಳು ಉತ್ತಮವಾಗಿ ಮುನ್ನೆಡೆಯಲು ಸಾಧ್ಯವಾಗುತ್ತದೆ ಎಂದರು.

    ಶಾಲೆಯ ವಿದ್ಯಾರ್ಥಿನಿಯ ಚಿಕಿತ್ಸೆಗೆ ದೊಡ್ಡ ಮೊತ್ತದ ಹಣ ಸಂಗ್ರಹಿಸಲು ಸಹಕರಿಸಿದ ಶಾಲೆಯ ಪೋಷಕರಿಗೆ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್ ಕೆ. ಮತ್ತು ಶಿಕ್ಷಕ ವೃಂದದವರು ಕೃತಜ್ಞತೆ ಸಲ್ಲಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × 3 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.