Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸುವಲ್ಲಿ ವಚನಗಳು ಪ್ರಮುಖ ಪಾತ್ರ ವಹಿಸುತ್ತವೆ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸುವಲ್ಲಿ ವಚನಗಳು ಪ್ರಮುಖ ಪಾತ್ರ ವಹಿಸುತ್ತವೆ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : 12 ನೇ ಶತಮಾನವು ವಚನ ಸಾಹಿತ್ಯದಲ್ಲಿ ಬಹು ಮುಖ್ಯವಾದ ಕಾಲಘಟ್ಟವಾಗಿದ್ದು, ವಚನಕಾರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಅಜ್ಜರಕಾಡುವಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ, ಶ್ರೀ ಮಹಾಯೋಗಿ ವೇಮನ ಮತ್ತು ಶ್ರೀಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಹನೀಯರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

    ವಚನಕಾರರು ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುವುದರೊಂದಿಗೆ ಸಮಾಜದಲ್ಲಿನ ಮೌಢ್ಯ, ಮೇಲು-ಕೀಳು, ಶ್ರೀಮಂತ-ಬಡವ, ಕಂದಾಚಾರದ ವಿರುದ್ಧ ಹೋರಾಡಿದ್ದಾರೆ. ಇಂತಹ ವಚನಕಾರರ ಜಯಂತಿಗಳನ್ನು ಆಚರಿಸುವ ಮೂಲಕ ಅವರುಗಳ ಚಿಂತನೆಗಳನ್ನು, ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು, ಶಿವಶರಣೆಯರು ನಡೆದಬಂದ ಹಾದಿ ಪ್ರತಿಯೊಬ್ಬರಿಗೂ ದಾರಿದೀಪವಾಗಲಿದೆ ಎಂದರು.

    ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರ, ಮಹಾಯೋಗಿ ವೇಮನ ಮತ್ತು ಅಂಬಿಗರ ಚೌಡಯ್ಯ ನವರು ಬಸವಣ್ಣನವರ ಸಮಕಾಲೀನ ವಚನಕಾರರಾಗಿದ್ದರು. 12 ನೇ ಶತಮಾನದಲ್ಲಿ ವಚನಕಾರರು ತಮ್ಮ ಅಗಾಧ ಅನುಭವದ ಆಧಾರದ ಮೇಲೆ ಸಮಾಜದಲ್ಲಿನ ಅಂಕುಡೊAಕುಗಳನ್ನು ತಿದ್ದಲು ಸರಳವಾಗಿ ವಚನಗಳನ್ನು ಸೃಷ್ಠಿಸಿ, ಸಮಾಜ ಸರಿದಾರಿಯಲ್ಲಿ ಹೋಗಲು ಪ್ರಯತ್ಮ ಮಾಡಿದ್ದಾರೆ ಎಂದರು.

    ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನಾ ಪಚ್ಚಿನಡ್ಕ ಉಪನ್ಯಾಸ ನೀಡಿ, ಮಾತನಾಡಿ, ಜನಸಾಮಾನ್ಯರಿಗೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳನ್ನು ಅವರುಗಳ ಆಡು ಮಾತಿನಲ್ಲಿಯೇ ತಿಳಿಸುವ ಅನಿವಾರ್ಯತೆ ಶಿವಶರಣೆಯರಲ್ಲಿ ಇತ್ತು. ಸಾಮಾನ್ಯ ಜನರೂ ಸಹ ಭಗವಂತನ್ನು ಪೂಜಿಸಲು ಸಾಧ್ಯ ಎಂದು ವಚನಕಾರರು ತೋರಿಸಿಕೊಟ್ಟಿದ್ದರು ಎಂದರು.

    Click here

    Click here

    Click here

    Call us

    Call us

    ಮಹನೀಯರು, ದಾರ್ಶನಿಕರ ತತ್ವ ಆದರ್ಶಗಳು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿರದೆ, ಇಡೀ ಮನುಕುಲಕ್ಕೆ ಅನ್ವಯವಾಗಲಿದ್ದು, ಇವುಗಳನ್ನು ಎಲ್ಲಾ ವರ್ಗದ ಜನರು ಪಾಲಿಸಬಹುದಾಗಿದ್ದು, ಅದರಲ್ಲೂ ವಿದ್ಯಾರ್ಥಿಗಳು ವಚನಕಾರರ ಸಂದೇಶವನ್ನು ತಮ್ಮ ಬದುಕಿನಲ್ಲಿ ಮೈಗೊಡಿಸಿಕೊಳ್ಳಬೇಕು ಎಂದರು.

    ಡಾ. ಜಿ. ಶಂಕರ್ ಕಾಲೇಜಿನ ಪ್ರಾಂಶುಪಾಲರು ಶ್ರೀಧರ್ ಪ್ರಸಾದ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹನ್ನರಡನೇ ಶತಮಾನದ ವಚನಕಾರರಲ್ಲಿ ಒಬ್ಬರಾದ ಅಂಬಿಗರ ಚೌಡಯ್ಯ ವೃತ್ತಿಯಲ್ಲಿ ಅಂಬಿಗನಾದರೂ ಪ್ರವೃತ್ತಿಯಲ್ಲಿ ವಚನಕಾರರಾಗಿ ಕನ್ನಡಕ್ಕೆ ಸಾಕಷ್ಟು ವಚನಗಳನ್ನು ನೀಡಿದ್ದಾರೆ.ಅವರ ಸನ್ಮಾರ್ಗದಲ್ಲೇ ಇಂದಿನ ಜನತೆ ನಡೆಯಬೇಕಿದೆ. ತಮ್ಮ ವಚನಗಳಿಂದಲೇ ಜನರನ್ನು ಜಾಗೃತರನ್ನಾಗಿ ಮಾಡಿದ ಮಹಾನ್ ಸಂತ ಎಂದರು.

    ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾ, ಜಿಲ್ಲಾ ಮೊಗವೀರ ಸಂಘದ ಅಧ್ಯಕ್ಷ ದಿನೇಶ್ ಎರ್ಮಾಳು, ವಿದ್ಯಾರ್ಥಿ ನಾಯಕಿಯರಾದ ನಿಷ್ಮಾ, ಪ್ರೀತಿ, ಕಾಲೇಜಿನ ಉಪನ್ಯಾಸಕರುಗಳು, ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

      ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿನಿ ಕಾತ್ಯಾಯಿನಿ ನಿರೂಪಿಸಿದರೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d