Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು ಅತಿಥಿಗಳಂತೆ ಸತ್ಕರಿಸಬೇಕು: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು ಅತಿಥಿಗಳಂತೆ ಸತ್ಕರಿಸಬೇಕು: ಜಿಲ್ಲಾಧಿಕಾರಿ

    Updated:27/01/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು ಅತಿಥಿಗಳಂತೆ ಕಾಣುವುದರೊಂದಿಗೆ ಅವರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿದರು.

    ಜಿಲ್ಲೆಗೆ ಕಳೆದ ಸಾಲಿನಲ್ಲಿ 4.5 ಕೋಟಿಗೆ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ವರ್ಷದಿಂದ ವರ್ಷಕ್ಕೆ ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಪ್ರವಾಸಿಗರ ರಕ್ಷಣೆ ಹಾಗೂ ಅನುಕೂಲಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

    ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಶೇಕಡ 70ಕ್ಕಿಂತ ಹೆಚ್ಚು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರವನ್ನು ಪ್ರವಾಸೊದ್ಯಮದ ಭಾಗವಾಗಿರಬೇಕು ಎಂಬ ಮುಖ್ಯ ಉದ್ದೇಶದಿಂದ ಅದನ್ನು ಉತ್ತೇಜಿಸಬೇಕು ಇತ್ತಿಚೀನ ದಿಗಳಲ್ಲಿ ಕೃಷಿ ಪ್ರವಾಸೋದ್ಯಮವು ಬೆಳೆಯುತ್ತಿದೆ ಇದರ ಭಾಗಿದಾರರಿಗೆ ಸರಕಾರ ವತಿಯಿಂದ ಸಹಕಾರ ನೀಡಲಾಗುವುದು ಎಂದರು.

    ಜಿಲ್ಲೆಯಲ್ಲಿ ಪ್ರವಾಸೊದ್ಯಮದಿಂದಾಗಿ ಅನೇಕ ಜನರಿಗೆ ಉದ್ಯೋಗ ಲಭಿಸುದರ ಜೊತೆಗೆ ಆರ್ಥಿಕ ಲಾಭವಾಗುತ್ತದೆ ಎಂದ ಅವರು ಪ್ರವಾಸೊದ್ಯಮ ತಾಣಗಳಲ್ಲಿ ಸ್ವಚ್ಚತೆಗೆ ಆಧ್ಯತೆ ನೀಡಿ, ಅಲ್ಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು, ಅಲ್ಲಿನ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವುದು ಸೂಕ್ತ ಎಂದರು.

    Click here

    Click here

    Click here

    Click Here

    Call us

    Call us

    ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಲಾಂಛಣ ಅನಾವರಣ ಮಾಡಿ  ಮಾತನಾಡಿ ಕೃಷಿ ಪ್ರವಾಸೋದ್ಯಮಕ್ಕೆ ಉತೇಜನ ನೀಡಬೇಕು ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಆಧ್ಯತೆ ನೀಡಬೇಕು ಎಂದ ಅವರು, ಪ್ರಜ್ಞಾವಂತರಾದ ಈ ಜಿಲ್ಲೆಯ ಜನರು  ಸಂಸ್ಕಾರಯುತವಾಗಿ  ಪ್ರವಾಸಿಗರೊಂದಿಗೆ ನಡೆದುಕೊಂಡು ಹೆಚ್ಚೆಚ್ಚು ಜನರನ್ನು ಆಕರ್ಷಿಸಬೇಕೆಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳ ಸೊಬಗನ್ನು ಹಾಗೂ ಇಲ್ಲಿನ ಸಂಸ್ಕೃತಿಯನ್ನು ಸವಿಯಲು ಬರುತ್ತಾರೆ ಇದಕ್ಕೆ ನಾವುಗಳು ಪೂರಕವಾಗಿ ಸ್ಪಂದಿಸಬೇಕು ಎಂದ ಅವರು ಕೃಷಿ ಪ್ರವಾಸೋಧ್ಯಮದಲ್ಲಿ ಬಾರಿ ಬಂಡವಾಳ ಹೂಡಿಕೆಯ ಅವಶ್ಯಕತೆ ಇರುವುದಿಲ್ಲ, ಇದರಿಂದ ಕೃಷಿಯ ಆದಾಯದ ಜೊತೆಗೆ ಹೆಚ್ಚುವರಿ ಆದಾಯ ಹೊಂದಲು ಸಾಧ್ಯ. ರಾಜ್ಯದ ಜಿ.ಡಿ.ಪಿ ಗೆ ಕೊಡುಗೆ ನೀಡುವುದರಲ್ಲಿ ರಾಜ್ಯ 5ನೇ ಸ್ಥಾನದಲ್ಲಿ ಪಡೆದಿದೆ ಎಂದರು.

    ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಂಘದ ಅಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿದರು.

    ಪ್ರಗತಿ ಪರ ಕೃಷಿಕ ಇನ್ನಾ ಚಂದ್ರಕಾಂತ್‌ರಾವ್ ಅವರು ಕೃಷಿ ಚಟುವಟಿಕೆ ಹಾಗೂ ಪ್ರವಾಸೊಧ್ಯಮ ಕುರಿತು ಉಪನ್ಯಾಸ ನೀಡಿದರು.

    ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ನೂತನ ವೆಬ್‌ಸೈಟ್ ಅನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ, ಜಿಲ್ಲಾ ಪ್ರಭಾರ ಅಪರ ಜಿಲ್ಲಾಧಿಕಾರಿ ನಾಗರಾಜ್ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    5 × 4 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.