ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಸ್ಕೂಲ್‌ನಲ್ಲಿ ನಡೆದ ಎಐಸಿಎಸ್ ಉಡುಪಿ ಮತ್ತು ದಕ್ಷಿಣ ಕನ್ನಡ ಅಂತರ್ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 17ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಪಡೆಯಿತು.
ವಿದ್ಯಾರ್ಥಿಗಳ ಈ ಅಮೋಘ ಪ್ರದರ್ಶನದ ಕುರಿತಾಗಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಪ್ರತಿಕ್ರಿಯಿಸಿ “2024-25 ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ ಕ್ರೀಡಾಪಟುಗಳು ಕಬಡ್ಡಿ, ಬ್ಯಾಡ್ಮಿಂಟನ್, ಅಥ್ಲೆಟಿಕ್ ಸ್ಪರ್ಧೆಗಳಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಪ್ರಶಸ್ತಿ, ಪದಕಗಳನ್ನು ಗೆದ್ದಿರುವುದು ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದೆ. ಇಂದು ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿಯೂ ತೃತೀಯ ಬಹುಮಾನಕ್ಕೆ ನಾವು ಭಾಜನರಾಗಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ. ಮುಂಬರುವ ದಿನಗಳಲ್ಲಿ ಪರಿಣಾಮಕಾರಿ ಶೈಕ್ಷಣಿಕ ಚಟುವಟಿಕೆಗಳ ಜೊತೆಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳತ್ತಲೂ ಹೆಚ್ಚಿನ ಗಮನ ಕೇಂದ್ರೀಕರಿಸಲಿದ್ದೇವೆ. ನಮ್ಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೇ ನಮ್ಮ ಮೂಲ ಧ್ಯೇಯವಾಗಿದೆ” ಎನ್ನುತ್ತಾ ಅದ್ಭುತ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಕರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.










