Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ, ಮರಳು ಸರಳ ರೀತಿಯಲ್ಲಿ ದೊರೆಯಲಿ: ಶಾಸಕ ಯಶ್‌ಪಾಲ್ ಎ. ಸುವರ್ಣ
    ಉಡುಪಿ ಜಿಲ್ಲೆ

    ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ, ಮರಳು ಸರಳ ರೀತಿಯಲ್ಲಿ ದೊರೆಯಲಿ: ಶಾಸಕ ಯಶ್‌ಪಾಲ್ ಎ. ಸುವರ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ ಹಾಗೂ ಮರಳು ಸರಳವಾಗಿ ನಿಗಧಿತ ಬೆಲೆಗೆ ಜನಸಾಮಾನ್ಯರಿಗೆ ದೊರಕುವಂತೆ ಗಣಿ ಇಲಾಖೆ ಕ್ರಿಯಾಶೀಲವಾಗಿ ಕಾರ್ಯವನ್ನು ನೂತನ ಕಟ್ಟಡದಲ್ಲಿ ನಿರ್ವಹಿಸಲಿ ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. 

    Click Here

    Call us

    Click Here

    ಅವರು ಅಂದು ನಗರದ ದೊಡ್ಡಣಗುಡ್ಡೆಯಲ್ಲಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಖನಿಜ ಭವನ-ನೂತನ ಕಚೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

    ಉಡುಪಿ ಜಿಲ್ಲೆಯು ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಯಾಗಿದೆ. ಅಭಿವೃದ್ಧಿ ಹೊಂದಲು ಹೊಸ ಹೊಸ ಬೃಹತ್ ಕಟ್ಟಡಗಳು, ರಸ್ತೆ, ಸೇತುವೆ ನಿರ್ಮಾಣವಾಗುವುದರೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುತ್ತದೆ. ಇವುಗಳ ನಿರ್ಮಾಣಕ್ಕೆ ಅಗತ್ಯವಿರುವ ಹೊÊಯ್ಗೆ ಹಾಗೂ ಜಲ್ಲಿ ನಿರ್ಮಾಣಕ್ಕೆ ತಕ್ಕಂತೆ ಪೂರೈಸುವ ಕಾರ್ಯ ಗಣಿ ಇಲಾಖೆಯ ಸಹಕಾರದೊಂದಿಗೆ ಆಗಬೇಕು ಎಂದರು.

    ಜಿಲ್ಲೆಯ ಜನರಿಗೆ ಗಣಿ ಇಲಾಖೆ ತಮ್ಮ ಸೇವೆಯನ್ನು ಮಾಡಲು ನೂತನವಾಗಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಕಟ್ಟಡದಲ್ಲಿ ಉತ್ತಮ ರೀತಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿ ಎಂದು ತಿಳಿಸಿದರು.

    ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ನಂಜುಂಡಸ್ವಾಮಿ ಮಾತನಾಡಿ, ಸಾರ್ವಜನಿಕರು, ಕಲ್ಲುಬಂಡೆ ಗುತ್ತಿಗೆದಾರರು, ಮರಳು ಗುತ್ತಿಗೆದಾರರು ಹೊಸ ಖನಿಜ ಭವನದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. 

    Click here

    Click here

    Click here

    Click Here

    Call us

    Call us

    ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿ ಇಲಾಖೆಯ ಅಡಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಕಲ್ಲುಗಳು, ಜೇಡಿಮಣ್ಣು, ಮೂರಾಕಲ್ಲು, ಮರಳು, ಸಿಲಿಕಾ ಮರಳು ಹಾಗೂ ಅಲಂಕಾರಿಕ ಶಿಲಾ ಕಲ್ಲುಗಳ ಒಟ್ಟು 167 ಗಣಿ ಗುತ್ತಿಗೆಗಳನ್ನು ನೀಡಲಾಗಿದೆ. ಅಲ್ಲದೇ 45 ಕ್ಕೂ ಹೆಚ್ಚು ಕ್ರಷರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳ ಕಾರ್ಯಚಟುವಟಿಕೆಗಳ ನಿಯಂತ್ರಣ ಕಾರ್ಯನಿರ್ವಹಿಸಲು ವ್ಯವಸ್ಥಿತವಾದ ನೂತನ ಕಟ್ಟಡ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲು ಸಹಕಾರಿಯಾಗಲಿದೆ ಎಂದರು.

    ಪ್ರತಿಯೊಂದು ಇಲಾಖೆಗೂ ಸ್ವಂತ ಕಚೇರಿ ಇದ್ದಾಗ ಮಾತ್ರ ಅದು ಸ್ವತಂತ್ರö್ಯವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ. ಸಾರ್ವಜನಿಕರಿಗೆ ಈ ಕಚೇರಿಯು ಉತ್ತಮ ರೀತಿಯಲ್ಲಿ ಸೇವೆ ನೀಡುವುದರ ಮೂಲಕ ಜಿಲ್ಲೆಯಲ್ಲಿ ಇನ್ನಷ್ಟು ಉದ್ಯಮಕ್ಕೆ ಪ್ರೋತ್ಸಾಹ ಸಿಗುವಂತಾಗಲಿ ಎಂದರು.

     ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜೆ.ಯು ಸ್ವಾಗತಿಸಿ, ವಿನೂತ ನಿರೂಪಿಸಿ, ಸಂಧ್ಯಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    eight + 14 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.