ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಂಡಿರುವ ಗ್ರಾಮ ಆಡಳಿತ ಅಧಿಕಾರಿಗಳ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರವು ತಾಲ್ಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಗಣೇಶ ಮೇಸ್ತರವರ ನೇತೃತ್ವದಲ್ಲಿ ಬೆಂಗಳೂರಿನ ಕಚೇರಿ ಕಂದಾಯ ಭವನದಲ್ಲಿ ಸೋಮವಾರದಂದು ಶಾಂತಿಯುತವಾಗಿ ನಡೆಯಿತು.
ಉಪಾಧ್ಯಕ್ಷರಾದ ಸಂದೀಪ್ ಭಂಡಾರ್ಕಾರ್, ಕಾರ್ಯದರ್ಶಿ ವಿರೇಶ್ ಹಾಗೂ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಬೈಂದೂರು ತಾಲ್ಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶೇಖರ ಪೂಜಾರಿ ಹಾಗೂ ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಜಿ. ಉಪ್ಪುಂದ ಮತ್ತು ಪದಾಧಿಕಾರಿಗಳು ಹಾಜರಾಗಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.










