Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ: ಮಾತೃಭೂಮಿ ಯುವ ಸಂಘಟನೆ ಆತ್ರಾಡಿ ವಾರ್ಷಿಕೋತ್ಸವ-ಯುವ ಸಂಭ್ರಮ-2025 ಸಂಪನ್ನ
    ಊರ್ಮನೆ ಸಮಾಚಾರ

    ವಂಡ್ಸೆ: ಮಾತೃಭೂಮಿ ಯುವ ಸಂಘಟನೆ ಆತ್ರಾಡಿ ವಾರ್ಷಿಕೋತ್ಸವ-ಯುವ ಸಂಭ್ರಮ-2025 ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಭಾರತ ದೇಶದಲ್ಲಿ ಯುವಜನತೆ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಶೇ.55ಕ್ಕಿಂತ ಯುವಸಂಪತ್ತು ನಮ್ಮ ದೇಶದಲ್ಲಿದೆ. ಜಾಗೃತ ಯುವಶಕ್ತಿ ಸಂಘಟಿತವಾಗಿ ಸಮಾಜಮುಖಿಯಾಗಿ ತೊಡಗಿಸಿಕೊಳ್ಳುತ್ತಿರುವುದು ಕಾಣುತ್ತಿದ್ದೇವೆ. ಸಶಕ್ತ ಯುವಜನತೆ ಸದುದ್ದೇಶದಿಂದ  ಜಾತಿಮತ ಧರ್ಮಬೇಧವಿಲ್ಲದೆ ಗ್ರಾಮದ ಒಳಿತಿಗೆ ತೊಡಗಿಸಿಕೊಳ್ಳುವುದರಿಂದ ಸಮಾಜದ ಏಳಿಗೆ ಸಾಧ್ಯ ಎಂದು ಎಂ.ಎಸ್ ಮಂಜ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರಾದ ರಾಜ್ಯೋತ್ಸವ ಪ್ರಶಸಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹೇಳಿದರು.

    Click Here

    Call us

    Click Here

    ಅವರು ವಂಡ್ಸೆ ಆತ್ರಾಡಿಯ ಕಂಬಳಗದ್ದೆ ವಠಾರದಲ್ಲಿ ಜರಗಿದ  ಮಾತೃಭೂಮಿ ಯುವ ಸಂಘಟನೆಯ 8ನೇ ವರ್ಷದ ವರ್ಷೋತ್ಸವ ‘ಯುವ ಸಂಭ್ರಮ-2025’ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಪ್ರತಿಯೊಬ್ಬರ ಮೇಲು ಹಲವು ಋಣಗಳು ಇರುತ್ತದೆ. ಸಮಾಜದ ಋಣವನ್ನು ಪ್ರತಿಯೊಬ್ಬರು ತೀರಿಸಬೇಕು. ಈ ಸಂಘಟನೆಯನ್ನು ನಾನೇ ಉದ್ಘಾಟಿಸಿದ್ದೆ. ಅಂದಿನಿಂತ ಇಂದಿನ ತನಕ ನಿರಂತರವಾಗಿ ಕಾರ್ಯಚಟುವಟಿಕೆಯಿಂದ ಮುನ್ನೆಡೆಯುತ್ತಿರುವುದು ಸಂತೋಷದ ವಿಚಾರ ಎಂದರು.

    ಮಾತೃಭೂಮಿ ಯುವ ಸಂಘಟನೆಯ ಅಧ್ಯಕ್ಷ ಶಶಿಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

    ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಕೈಗಾರಿಕೋದ್ಯಮಿ ಎನ್. ರಮೇಶ ದೇವಾಡಿಗ ಅಡಿಕೆಕೊಡ್ಲು ಅವರನ್ನು ಸನ್ಮಾನಿಸಿ ಮಾತನಾಡಿ, ಯುವ ಜನತೆ ಸಂಘಟಿತರಾಗಿ ತೊಡಗಿಸಿಕೊಳ್ಳುವುದರಿಂದ  ಗ್ರಾಮದ ಅಭಿವೃದ್ಧಿ ಸಾಧ್ಯವಿದೆ. ಮಾತೃಭೂಮಿ ಯುವ ಸಂಘಟನೆ ಈ ಭಾಗದಲ್ಲಿ ಜನಮಾನಸಲ್ಲಿ ಉಳಿಯುವಂತಹ ಕೆಲಸ ಮಾಡುತ್ತಿದೆ ಎಂದರು.

    Click here

    Click here

    Click here

    Click Here

    Call us

    Call us

    ಬೆಂಗಳೂರು ಉದ್ಯಮಿ ಬಿ.ಎಂ. ಬಾಳಿಕೆರೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ವಂಡ್ಸೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಅವಿನಾಶ್ ಬಹುಮಾನ ವಿತರಿಸಿದರು.

    ಈ ಸಂದರ್ಭದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ರತ್ನ ಪ್ರಶಸ್ತಿ ಪುರಸ್ಕೃತರಾದ ಕೈಗಾರಿಕೋದ್ಯಮಿ ಎನ್. ರಮೇಶ ದೇವಾಡಿಗ ಅಡಿಕೆಕೊಡ್ಲು ಅವರನ್ನು ಸನ್ಮಾನಿಸಲಾಯಿತು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ರಮೇಶ ದೇವಾಡಿಗ ಅವರು ಮಾತೃಭೂಮಿ ಯುವ ಸಂಘಟನೆ ಸಮಾಜ ಆಗುಹೋಗುಗಳಲ್ಲಿ ಸ್ಪಂದಿಸುತ್ತಾ ಬಂದಿದೆ. ಆತ್ರಾಡಿಯಂಥಹ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಮುನ್ನೆಡೆಯುತ್ತಿದೆ. ಯುವಜನತೆ ಸಂಘಟನಾಶಕ್ತಿಯಿಂದ ಏನೂ ಬೇಕಾದರೂ ಮಾಡಲು ಸಾಧ್ಯ ಎಂದರು.

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಂಡ್ಸೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ತಾ.ಪಂ. ಮಾಜಿ ಸದಸ್ಯರಾದ ಉದಯ ಜಿ.ಪೂಜಾರಿ, ಉಪ್ರಳ್ಳಿ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ಯ ಕಳಿ,  ಶ್ರೀ ಮೂಕಾಂಬಿಕಾ ಸೇವಾ ಸಹಕಾರಿ ಸಂಘ ವಂಡ್ಸೆ ಇದರ ಅಧ್ಯಕ್ಷರಾದ ಪ್ರದೀಪ ಕುಮಾರ್ ಶೆಟ್ಟಿ, ಕರ್ಕುಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ. ಮಂಜುನಾಥ ಶೆಟ್ಟಿ ನಂದ್ರೋಳ್ಳಿ, ಉದ್ಯಮಿ ಶಶಿಧರ ಶೆಟ್ಟಿ ಕೊರಾಡಿಮನೆ ವಂಡ್ಸೆ, ಆತ್ರಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಕುಸುಮಾಕರ ಶೆಟ್ಟಿ, ಉದ್ಯಮಿ ಜಯರಾಮ ಶೆಟ್ಟಿ ಬೆಳ್ವಾಣ, ಗಣೇಶ ಶೆಟ್ಟಿ ಕೆರಾಡಿ, ಶ್ರೀಧರ ಆಚಾರ್ಯ ಆಲೂರು ಭಾಗವಹಿಸಿದ್ದರು.

    ಮಾತೃಭೂಮಿ ಯುವ ಸಂಘಟನೆ ಗೌರವಾಧ್ಯಕ್ಷರಾದ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ವಿನಂತ ಗಾಣಿಗ ಉಪಸ್ಥಿತರಿದ್ದರು. ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮಕ್ಕೆ ಆಗಮಿಸಿ ಶುಭಕೋರಿದರು.

    2025ನೇ ಶೈಕ್ಷಣಿಕ ಸಾಧನೆ ಮಾಡಿದ ಆಯುಷ್ ಕಲ್ಮಡಿ, ರೋಹಿತ್ ಬಳಗೇರಿ, ರಕ್ಷಿತಾ ಅಡಿಕೆಕೊಡ್ಲು ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವೈದ್ಯಕೀಯ ಸಹಾಯಧನ ವಿತರಿಸಲಾಯಿತು.

    ಮಾತೃಭೂಮಿ ಯುವ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಸಂದೇಶ ಶೆಟ್ಟಿ ಅಡಿಕೆಕೊಡ್ಲು ಸ್ವಾಗತಿಸಿದರು. ದಿವ್ಯಾಶ್ರೀ ಮತ್ತು ತಂಡದವರು ಪ್ರಾರ್ಥನೆ ಮಾಡಿದರು. ಸಂಘಟನೆಯ ಸ್ಥಾಪಕ ಅಧ್ಯಕ್ಷ ಗಣೇಶ ದೇವಾಡಿಗ ಅಡಿಕೆಕೊಡ್ಲು ವರದಿ ಮಂಡಿಸಿದರು. ಸಂಘಟನಾ ಕಾರ್ಯದರ್ಶಿ ಪ್ರಸಾದ್ ಆಚಾರ್ಯ ಸನ್ಮಾನ ಪತ್ರ ವಾಚಿಸಿದರು. ಜೊತೆ ಕ್ರೀಡಾ ಕಾರ್ಯದರ್ಶಿ ಧರ್ಮ ಗುಂದಿನಮನೆ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಗೌರವ ಸಲಹೆಗಾರರಾದ ವಿಠಲ ಆಚಾರ್ಯ ಸಾಧಕ ವಿದ್ಯಾರ್ಥಿಗಳ ಪರಿಚಯಿಸಿದರು. ಉದಯ ಅಂಗಡಿಮನೆ ಹೊಸ ಸದಸ್ಯರ ಪಟ್ಟಿ ವಾಚಿಸಿದರು. ಗೌರವ ಸಲಹೆಗಾರರಾದ ಶಂಕರ ಆಚಾರ್ಯ ಆತ್ರಾಡಿ (ಕಾರ್ಯದರ್ಶಿ,, ಜಡ್ಕಲ್ ಗ್ರಾ.ಪಂ) ವಂದಿಸಿದರು. ಪತ್ರಕರ್ತ ಪ್ರಭಾಕರ ಆಚಾರ್ಯ ಚಿತ್ತೂರು ಕಾರ್ಯಕ್ರಮ ನಿರ್ವಹಿಸಿದರು.

    ಸ್ಥಳೀಯ ಪುಟಾಣಿಗಳಿಂದ ಯಕ್ಷ ನೃತ್ಯ, ಭರತನಾಟ್ಯ, ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ತಂಡದ ಕಲಾವಿದರಿಂದ ‘ಮಂದಾರ್ತಿ ಮಾದೇವಿ’ನೃತ್ಯ ರೂಪಕ ನಡೆಯಿತು. ಬಳಿಕ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ‘ವೀರ ಬರ್ಭರಿಕʼಪ್ರದರ್ಶನಗೊಂಡಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    2 × 3 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.