Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವ ಮನೋಭಾವ ಹೊಂದಲಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವ ಮನೋಭಾವ ಹೊಂದಲಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಉತ್ತಮವಾಗಿ ಬರೆಯುವಂತೆ ಅವರುಗಳ ಮನಸ್ಥಿತಿಯನ್ನು ಹೊಂದುವಂತೆ ಪೂರಕ ಕಾರ್ಯಗಳನ್ನು ಶಾಲಾ ಶಿಕ್ಷಕರು ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಎಸ್ಎಸ್ಎಲ್‌ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿದ್ದು, ಅಂತಿಮವಾಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಪಕವಾಗಿ ಎದುರಿಸುವ ಕೊನೆಯ ಹಂತದಲ್ಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಪರಿಣಾಮಕಾರಿ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಬೇಕು. ಕೆಲವು ವಿಷಯಗಳ ಓದಿನಲ್ಲಿ ಹಿಂದಿರುವಂತಹ ಮಕ್ಕಳುಗಳಿಗೆ ಕಷ್ಟಕರ ವಿಷಯಗಳಿಗೆ ಆದ್ಯತೆ ನೀಡಿ, ಉತ್ತಮ ಅಧ್ಯಯನ ಮಾಡಲು ಸಹಕರಿಸಬೇಕೆಂದರು.

    ಕಳೆದ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿಯೇ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಶೇ. 97 ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿ ಇತ್ತು. ಇದಕ್ಕೆ ತಮಗೆಲ್ಲ ಮತ್ತೊಮ್ಮೆ ಅಭಿನಂದನೆಗಳು. ಈ ಬಾರಿಯೂ ಪರೀಕ್ಷಾ ಫಲಿತಾಂಶದಲ್ಲಿ ಶೇಕಡಾವಾರು ಪ್ರಮಾಣ ಕಳೆದ ಬಾರಿಗಿಂತ ಹೆಚ್ಚು ಪಡೆದು ಪ್ರಥಮ ಸ್ಥಾನವನ್ನು ಪಡೆಯಲು ಪರಿಣಾಮಕಾರಿಯಾಗಿ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು ಎಂದರು.

    ವಿದ್ಯಾರ್ಥಿಗಳಿಗೆ ಭಯವಿಲ್ಲದೇ ಪರೀಕ್ಷೆಯನ್ನು ಎದುರಿಸಲು ವಿಷಯವಾರು ತಂತ್ರಗಳನ್ನು ಕೊನೆಯ ಗಳಿಗೆಯವರೆಗೂ ವಿದ್ಯಾರ್ಥಿಗಳಿಗೆ ಸಲಹೆ ನೀಡಬೇಕು ಎಂದ ಅವರು, ಕೆಲವು ವಿದ್ಯಾರ್ಥಿಗಳಿಗೆ ಓದಲು ವಿವಿಧ ರೀತಿಯ ಸಮಸ್ಯೆಗಳು ಇರುತ್ತವೆ. ಅಂತಹ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿಯೇ ಅಧ್ಯಯನ ಮಾಲು ಪೂರಕ ವಾತಾವರಣವನ್ನು ಕಲ್ಪಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ಶಿಸ್ತನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ನಿರಂತರವಾಗಿ ಆರಂಭದಿAದಲೇ ವಿದ್ಯಾಭ್ಯಾಸ ಮಾಡಿದ್ದಲ್ಲಿ ಯಾವುದೇ ರೀತಿಯ  ತೊಂದರೆಗಳು ಉಂಟಾಗುವುದಿಲ್ಲ. ಕೊನೆಯ ಪರೀಕ್ಷಾ ದಿನಗಳಲ್ಲಿ ಓದಲು ಹೋದಾಗ ಗೊಂದಲ ಉಂಟಾಗುತ್ತವೆ. ತಾಳ್ಮೆಯಿಂದ ಓದಬೇಕು. ಸಮಸ್ಯೆಗಳಿದ್ದಲ್ಲಿ ಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಬಗೆಹರಿಸಿಕೊಳ್ಳಬೇಕೆಂದರು.

    ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಹೊಂದಬೇಕು. ವ್ಯಸನಗಳಿಂದ ದೂರವಿರಬೇಕು ಎಂದ ಅವರು, ಶಾಲೆಯ 100 ಮೀಟರ್ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ನಿರ್ಬಂಧವಿದೆ. ಇದು ಉಲ್ಲಂಘನೆಯಾಗದಂತೆ ಮುಖ್ಯ ಶಿಕ್ಷಕರು ಎಚ್ಚರ ವಹಿಸಬೇಕೆಂದರು.

    ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಡಯಟ್ ಉಪಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಸೈಂಟ್ ಸಿಸಿಲೀಸ್ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.