Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣನವರ್
    Uncategorized

    ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣನವರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here


    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಸಂರಕ್ಷಣೆ ಮಾಡುವುದು ಪೋಷಕರು ಅಧಿಕಾರಿಗಳು ಸೇರಿದಂತೆ ನಾಗರೀಕ ಸಮಾಜದ ಜವಾಬ್ದಾರಿಯಾಗಿದೆ. ಇದನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಕಿರಣ್ ಎಸ್.ಗಂಗಣ್ಣನವರ್ ಹೇಳಿದರು.

    Click Here

    Call us

    Click Here

    ಅವರು ನಗರದ ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಹಯೋಗದಲ್ಲಿ ಮಕ್ಕಳ ರಕ್ಷಣೆ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿ (ಪಿಎಸ್‌ಐ) ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

    ಪ್ರಾಮಾಣಿಕತೆ ಎನ್ನುವುದು ಸಾಮಾಜಿಕ ಜೀವನದಲ್ಲಿ ಪ್ರತಿಯೊಬ್ಬರಿಗೂ ಅನ್ವಯಿಸುತ್ತದೆ. ನಾವು ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ಕುಟುಂಬದಲ್ಲಿನ ಪೋಷಕರ ಭಿನ್ನಾಭಿಪ್ರಾಯಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರೊಂದಿಗೆ ಅವರುಗಳಲ್ಲಿ ಅಸುರಕ್ಷಿತ ಭಾವನೆ ಉಂಟು  ಮಾಡುತ್ತದೆ. ಇದು ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಇರುವ ಕಾನೂನುಗಳನ್ನು ಉಲ್ಲಂಘಿಸಲು ಪ್ರೇರೇಪಿಸುತ್ತದೆ. ಹಿರಿಯರು ಹೀಗಾಗದಂತೆ ಎಚ್ಚರವಹಿಸಬೇಕು ಎಂದರು.

     ಮಕ್ಕಳ ರಕ್ಷಣೆಗೆ ಸಂಬAಧಿಸಿದAತೆ ಕಾಯಿದೆಗಳಲ್ಲಿ ಅಡಕವಾಗಿರುವ ವ್ಯಕ್ತಿ ಹಾಗೂ ವ್ಯಕ್ತಿತ್ವಗಳು ನಮ್ಮವರೇ ಆಗಿರುತ್ತಾರೆ. ಕೆಟ್ಟ ಕೆಲಸಗಳನ್ನು ಮಾಡಿದವರ ವಿರುದ್ಧ ಸಾಕ್ಯಾಧಾರಗಳನ್ನು ಸಂಗ್ರಹಿರುವ ಸಂದರ್ಭದಲ್ಲಿ ಮನಸ್ಸು ಮತ್ತು ವಿವೇಕದಿಂದ ಕೆಲಸಗಳನ್ನು ಮಾಡಿದಾಗ ಯಶಸ್ಸು ನಮ್ಮದಾಗುತ್ತದೆ. ಇಂತಹ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಅಂತರಾತ್ಮ ಹಾಗು ಅಂತರ್‌ಚಕ್ಷುವಿನಿAದ ಕರ್ತವ್ಯ ನಿರ್ವಹಿಸಬೇಕು ಎಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಮಾತನಾಡಿ, ಮಕ್ಕಳ ರಕ್ಷಣೆಗೆ ಸಂಬAಧಿಸಿದAತೆ ಪ್ರತೀ ತಿಂಗಳು ನಿರಂತರವಾಗಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ. ಇಂತಹ ಕಾರ್ಯಾಗಾರಗಳು ಜ್ಞಾನವನ್ನು ಹೆಚ್ಚಿಸುವುದರೊಂದಿಗೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ ಎಂದ ಅವರು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರ ಬಗೆಗಿನ ಪ್ರಕರಣಗಳಲ್ಲಿ ಸೂಕ್ಷ್ಮವಾಗಿ ಯೋಚಿಸಿ, ವಿವೇಚನೆಯಿಂದ ಕಾನೂನಿನ ಅಡಿಯಲ್ಲಿ ನಿರ್ವಹಣೆ ಮಾಡಬೇಕು. ಹೀಗಾದಾಗ ಮಾತ್ರ ನೊಂದವರಿಗೆ ನ್ಯಾಯ ಸಿಗಲು ಸಾಧ್ಯ ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಮಕ್ಕಳ ಸುತ್ತಮುತ್ತಲಿನ ಪರಿಸರವು ಅವರುಗಳ ಮೇಲೆ ಒತ್ತಡ ಹೇರುವುದರೊಂದಿಗೆ ತಪ್ಪು ಮಾಡಲು ಅನುವು ಮಾಡಿಕೊಡುತ್ತದೆ. ಈ ಸಂದರ್ಭದಲ್ಲಿ ಮಕ್ಕಳ ರಕ್ಷಣೆಗೆ ಸಂಬAಧಿಸಿದ ಕಾಯ್ದೆಗಳನ್ನು ಅನುಷ್ಠಾನಗೊಳಿಸುವಾಗ ಮಕ್ಕಳನ್ನು ಅಪರಾಧಿಗಳಂತೆ ನೋಡದೇ ಅವರುಗಳೊಂದಿಗೆ ಸೂಕ್ಷö್ಮವಾಗಿ ವರ್ತಿಸಿ, ಘಟನೆಗೆ ಕಾರಣ ತಿಳಿಯುವುದರೊಂದಿಗೆ ಅವರುಗಳು ತಪ್ಪನ್ನು ತಿದ್ದುಕೊಂಡು ಮಗುವು ಸುಧಾರಣೆ ಹೊಂದಲು ದಾರಿ ಮಾಡಿಕೊಡಬೇಕು ಎಂದರು.

    ಕಲಿಕೆಗೆ ಕೊನೆ ಇರುವುದಿಲ್ಲ. ಅಂತಹ ಅಂಶಗಳನ್ನು ಕಾರ್ಯಾಗಾರದಲ್ಲಿ ತಿಳಿದುಕೊಳ್ಳುವುದರೊಂದಿಗೆ ಅಧಿಕಾರಿಗಳು ತಮ್ಮಲ್ಲಿರುವ ಸಮಸ್ಯೆಗಳಿಗೆ ಹಾಗೂ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.

    ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೊಣಿಲ್ ರಾಘವೇಂದ್ರ ಭಟ್ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಕಾಯ್ದೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ವಾಸ್ತವಿಕ ನೆಲೆಯಲ್ಲಿ ಎದುರಿಸುವ ಕುರಿತು ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಬಾಲ ನ್ಯಾಯ ಮಂಡಳಿಯ ಜಿಲ್ಲಾ ಅಧ್ಯಕ್ಷ ಮನುಪಟೇಲ್, ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ ಸಿದ್ದಲಿಂಗಪ್ಪ ಹಾಗೂ ಪಿ.ಎ ಹೆಗಡೆ, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ವಿವಿಧ ಠಾಣೆಗಳ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ  ಘಟಕದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಹಿರಿಯ ಮಕ್ಕಳ ಪೋಲಿಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ ಸ್ವಾಗತಿಸಿ, ಆರಕ್ಷಕ ಯೋಗೀಶ್ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    fourteen − 5 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.