Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೈಕ್ರೋ-ಫೈನಾನ್ಸ್, ಲೇವಾದೇವಿ ಸಂಸ್ಥೆಗಳ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮೈಕ್ರೋ-ಫೈನಾನ್ಸ್, ಲೇವಾದೇವಿ ಸಂಸ್ಥೆಗಳ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ

    Updated:21/03/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್, ಸಾಲ ನೀಡಿಕೆ ಏಜನ್ಸಿ ಹಾಗೂ ಲೇವದೇವಿದಾರರು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತ ಕ್ರಮಗಳ ಪ್ರತಿ ಬಂಧಕ ) ಆದೇಶ 2025 ನಿಯಮದನ್ವಯ ಜಿಲ್ಲಾ ನೋಂದಣಿ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ತಿಳಿಸಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳು, ಸಾಲ ನೀಡಿಕೆ ಎಜೇಂನ್ಸಿ ಹಾಗೂ ಲೇವಾ ದೇವಿ ದಾರರು ನೀಡುವ ದುಬಾರಿ ಬಡ್ಡಿಗಳಿಂದ ಜನರು ತೊಂದರೆ ಗೋಳಗಾಗುವುದರ ಜೊತೆಗೆ ಕೆಲವು ಸಂಸ್ಥೆಗಳು ಬಲವಂತ ವಾಗಿ ವಸೂಲಾತಿ ಅದರಲ್ಲೂ ವಿಶೇಷವಾಗಿ ರೈತರು, ಮಹಿಳೆಯರು ಆರ್ಥಿಕ ದುರ್ಬಲರು ಮೇಲೆ ದೌರ್ಜನ್ಯ ಹಾಗೂ ದಬ್ಬಾಳಿಕೆ ನಡೆಸುವ ಪ್ರಕರಣಗಳು ಆಗುತ್ತಿರುವ ಹಿನ್ನೆಲೆ,ಇವುಗಳ  ನಿಯಂತ್ರಣಕ್ಕೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿ ಬಂಧಕ) ಆದ್ಯದೇಶ  2025 ಜಾರಿಗೆ ತಂದಿದ್ದು, ಇದರ ಅನ್ವಯ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತುವ ಸಂಸ್ಥೆಗಳು ಕಡ್ಡಾಯವಾಗಿ ಮೂವತ್ತು ದಿನಗಳ ಒಳಗಾಗಿ ಸೂಕ್ತ ಪ್ರಧಿಕಾರದ ಮುಂದೆ ನೋಂದಣಿ ಕಡ್ಡಾಯವಾಗಿ ಮಾಡಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ  ಕಾರ್ಯನಿರ್ವಹಿಸುತ್ತಿರುವ , ಫೈನಾನ್ಸ್ ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ತಪ್ಪದೆ  ಪಾಲಿಸಬೇಕು ಎಂದ ಅವರು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ತೊಂದರೆ ನೀಡುವಂತಹ ಪ್ರಕರಣಗಳು  ಕೇಳಿ ಬರುತ್ತಿವೆ. ಕಾರಣ ಮಾರ್ಗಸೂಚಿಗಳು ಹಾಗೂ ನಿಯಮಗಳ ಪಾಲಿಸದೇ ಇರುವುದೇ ಇದಕ್ಕೆ ಕಾರಣವಾಗಿದೆ ಎಂದರು.

    ಆರ್.ಬಿ.ಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸ್‌ಗಳು ನಿಗಧಿತ ಮೊತ್ತದವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಕರ್ನಾಟಕ ಸರ್ಕಾರದ ಹೊಸ ಆದೇಶದ ಅನ್ವಯ ಸಾಲಗಾರನನ್ನು ಅಥವಾ ಅವರ ಕುಟುಂಬದ ಸದಸ್ಯರಿಗೆ ಒತ್ತಡ ಹಾಕುವುದು, ತಡಯೊಡ್ಡುವುದು, ಹಿಂಸೆಯನ್ನು ಬಳಸುವುದು, ಬೆದರಿಸುವುದು ಅವರನ್ನು ನಿರಂತರವಾಗಿ ಹಿಂಬಾಲಿಸುವುದು, ಸ್ವತ್ತಿನ ಬಳಕೆ ಅಡ್ಡಿಪಡಿಸುವುದು, ಹಣ ಪಾವತಿಗೆ ಬಲವಂತ ಹಾಗೂ ಅನುಚಿತ ಪ್ರಭಾವವನ್ನು ಬಳಸುವುದು ಸೇರಿದಂತೆ ಯಾವುದೇ ದೌರ್ಜನ್ಯಗಳನ್ನು ಸಾಲಗಾರನಿಂದ ಹಣ ವಸೂಲಾತಿಗಾಗಿ ಸ್ವತಹ ಅಥವಾ ಏಜೆಂಟಲ್ ಗಳ ಮೂಲಕ ಮಾಡುವಂತಿಲ್ಲ. ಒಂದು ವೇಳೆ ದೌರ್ಜನ್ಯ, ದಬ್ಬಾಳಿಕೆ ಯಂತಹ ಪ್ರಕರಣಗಳು ಮಾಡುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ರಾಜ್ಯ ಸರಕಾರ ಜಾರಿಗೆ ತಂದಿರುವ ಹೊಸ ನಿಯಮಗಳ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಗುವುದು ಎಂದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೋಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ,  ಮೈಕ್ರೋ ಫೈನಾನ್ಸ್ ಗಳ ಮುಖ್ಯಸ್ಥರು, ಲೇವಾದೇವಿಗಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    4 × three =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.