Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೀವನದ ಪ್ರತಿ ಹಂತದಲ್ಲಿಯೂ ಉದ್ದೇಶದ ಅರಿವಿರಲಿ: ಸುರೇಶ್ ಕಾಮತ್
    alvas nudisiri

    ಜೀವನದ ಪ್ರತಿ ಹಂತದಲ್ಲಿಯೂ ಉದ್ದೇಶದ ಅರಿವಿರಲಿ: ಸುರೇಶ್ ಕಾಮತ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಶಿಕ್ಷಣ ವ್ಯವಸ್ಥೆಯ ಆರಂಭದಲ್ಲೆ, ಒಬ್ಬ ವ್ಯಕ್ತಿಯಾಗಿ ತನ್ನ ಜೀವನದ ಉದ್ದೇಶವೇನೆಂಬುದನ್ನು ಅರಿಯಬೇಕು. ಜೀವನದಲ್ಲಿ ಗುರಿಯನ್ನು ಆರಂಭದಲ್ಲೆ ಅರಿಯುವುದು ಉತ್ತಮ. ಪ್ರತಿ ಕೆಲಸದಿಂದ ಬರುವ ಅನುಭವದಿಂದ ಬದುಕನ್ನು ಶ್ರೇಷ್ಠತೆಯೆಡೆಗೆ ಒಯ್ಯುವ ಕೆಲಸವಾಗಬೇಕಿದೆ ಎಂದು ಕೋಟೇಶ್ವರದ ರಾಜಾರಾಮ್ ಪೋಲಿಮರ್ಸ್ ಸಂಸ್ಥೆಯ ಸ್ಥಾಪಕ ಸುರೇಶ್ ಕಾಮತ್ ಹೇಳಿದರು.

    Click Here

    Call us

    Click Here

    ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಹಮ್ಮಿಕೊಂಡ ಎಂತುಝಿಯಾ ಕೋರ್ಪೊ ಕನೆಕ್ಟ್ ಫೆಸ್ಟ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದ ಯುವ ಪ್ರತಿನಿಧಿ ಮಿಥುನ್ ರೈ, ವೃತ್ತಿಪರ ಜೀವನವನ್ನು ಅತ್ಯುತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಮ್ಯಾನಜ್ಮೆಂಟ್ ಪದವಿ ಸೂಕ್ತ ಆಯ್ಕೆ. ಎಲ್ಲವನ್ನು ಪರಿಶ್ರಮದಿಂದ ಕಲಿಯಬೇಕು. ಸವಾಲುಗಳನ್ನು ಎದುರಿಸಿ ಮುನ್ನಡೆಯುವವ ನಿಜವಾದ ನಾಯಕನೆನಿಸಿಕೊಳ್ಳಬಲ್ಲ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದೆ ಅದನ್ನು ತಾವೇ ಗುರುತಿಸಿಕೊಳ್ಳಬೇಕು ಹಾಗೂ ಉಪನ್ಯಾಸಕರು ಸರಿಯಾದ ಮಾರ್ಗದರ್ಶನ ನೀಡಬೇಕು ಎಂದರು.

    ದಶಕಗಳ ಹಿಂದೆ ತಾನು ಪದವಿ ವಿದ್ಯಾರ್ಥಿಯಾಗಿದ್ದಾಗ  ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನ ಯಶಸ್ಸನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಏಷ್ಯಾ ಖಂಡದ ಹಲವು ದೇಶಗಳ ಪ್ರತಿನಿಧಿಗಳು ಪಾಲ್ಗೊಂಡು, ಸರ್ವರಿಂದಲೂ ಪ್ರಶಂಸೆಗೆ ಪಾತ್ರವಾದ ಸನ್ನಿವೇಶ ತನ್ನ ಮುಂದಿನ ಬದುಕಿಗೆ ನಾಯಕತ್ವವಹಿಸಲು ಸಹಕರಿಯಾದದ್ದನ್ನು ಸ್ಮರಿಸಿದರು. ತನ್ನ ಸಹಪಾಠಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವರ ಕಾಲೇಜು ದಿನಗಳಲ್ಲಿನ ನಾಯಕತ್ವ ಗುಣವನ್ನು ಕೊಂಡಾಡಿದರು.

    ವಿದ್ಯಾರ್ಥಿಗಳ ಪ್ರತಿಭೆಯನ್ನು ಅರಳುವಂತೆ ಮಾಡಲು ಆಳ್ವಾಸ್ ನೀಡುತ್ತಿರುವ ಪ್ರೋತ್ಸಾಹವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

    Click here

    Click here

    Click here

    Click Here

    Call us

    Call us

    ಇನ್ನೊರ್ವ ಮುಖ್ಯ ಅತಿಥಿ ಹಾಗೂ ಯುವ ಪ್ರತಿನಿಧಿ ನಂದನ್ ಮಲ್ಯ ಮಾತನಾಡಿ, ದೊಡ್ಡ ಕನಸುಗಳನ್ನು ಕಟ್ಟಿಕೊಳ್ಳುವ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಕನಸುಗಳನ್ನು ಕಟ್ಟಿಕೊಂಡಲ್ಲಿ ಮಾತ್ರ ಯಶಸ್ಸನ್ನು ಕಾಣುತ್ತೇವೆ. ಸೋಲು ಯಶಸ್ಸಿನ ಭಾಗ, ಹೊರತು ಪ್ರತಿಸ್ಪರ್ಧಿಯಲ್ಲ. ಅವಕಾಶಗಳ ಬಳಸುವಿಕೆಯಲ್ಲಿ ಫಲಿತಾಂಶವನ್ನು ಕಾಣಬಹುದು ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಅನುಭವಗಳಿಂದ ಶ್ರೇಷ್ಠ ಪಾಠವನ್ನು ಕಲಿಯಬೇಕು. ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯವಲ್ಲ. ಅದರಿಂದ ಲಭಿಸುವ ಅನುಭವ ಮುಖ್ಯ ಎಂದರು.

    ಎಂತುಝಿಯಾ ಕೋರ್ಪೊ ಕನೆಕ್ಟ್ ಫಸ್ಟ್‌ನ ಪೋಸ್ಟರ್ ಬಿಡುಗಡೆ ನಡೆಯಿತು. 

    ಕಾರ್ಯಕ್ರಮದಲ್ಲಿ ಪದವಿ ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥೆ ಸುರೇಖಾ ರಾವ್, ಸಂಯೋಜಕಿ ಅಕ್ಷತಾ ಪ್ರಭು, ಸಂಯೋಜಕ ಸುಹಾಸ್ ಶೆಟ್ಟಿ, ವಿದ್ಯಾರ್ಥಿ ಸಂಯೋಜಕ ಪ್ರಾಣೇಶ್ ಶೆಟ್ಟಿ ಮತ್ತು ವಿಧಿತ್ ಜೈನ್ ಇದ್ದರು.

    ಕಾರ್ಯಕ್ರಮವನ್ನು ವಿದ್ಯಾರ್ಥಿ ಸಾಥ್ವಿಕ್ ಸ್ವಾಗತಿಸಿ, ಸಾಗರ್ ವಂದಿಸಿ, ವಿದ್ಯಾರ್ಥಿನಿ ವೃಂದ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    17 − 9 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.