Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮನೆಯಲ್ಲಿದ್ದ ವೃದ್ಧೆಯ ಚಿನ್ನ ಎಗರಿಸಿದ ಖತಾರ್ನಾಕ್ ಕಳ್ಳ
    ಊರ್ಮನೆ ಸಮಾಚಾರ

    ಮನೆಯಲ್ಲಿದ್ದ ವೃದ್ಧೆಯ ಚಿನ್ನ ಎಗರಿಸಿದ ಖತಾರ್ನಾಕ್ ಕಳ್ಳ

    Updated:24/03/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಮನೆಯಲ್ಲಿ ವೃದ್ಧೆ ಮಾತ್ರ ಇರುವ ವೇಳೆ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಅವರೊಂದಿಗೆ ಮನೆಯವರಂತೆ ಮಾತನಾಡಿ ಆಕೆಯ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರಿನಲ್ಲಿ ಮಾ.20ರಂದು ನಡೆದಿದೆ. ರುದ್ರಮ್ಮ(92) ಚಿನ್ನ ಕಳೆದುಕೊಂಡಿರುವ ವೃದ್ಧೆ.

    Click Here

    Call us

    Click Here

    ಮಾ.20ರಂದು ಮನೆಯವರೆಲ್ಲರೂ ಸ್ಥಳೀಯ ಕೊಟ್ಟೂರು ದೇಗುಲದ ಜಾತ್ರೆಗೆಂದು ತೆರಳಿದ್ದರು. ಈ ವೇಳೆ ಮನೆಯಲ್ಲಿ ರುದ್ರಮ್ಮ ಒಬ್ಬರೇ ಇದ್ದರು. ದಿನನಿತ್ಯದಂತೆ ಅವರು ಮಲಗುವಾಗ ತಾನು ಧರಿಸಿದ್ದ ಚಿನ್ನದ ಸರವನ್ನು ಮಂಚದ ಮೇಲೆ ಕಳಚಿಟ್ಟಿದ್ದರು. ಜಾತ್ರೆಗೆ ತೆರಳಿದ್ದ ಅವರ ಅಳಿಯ ಶ್ರೀಧರ್ ಅವರು ದಿಢೀರನೇ ಮನೆಗೆ ಬಂದಿದ್ದು, ಈ ವೇಳೆ ಮನೆಯ ಬಾಗಿಲು ಒಡೆದಿರುವುದು ಕಂಡುಬಂದಿದೆ.

    ಈ ಬಗ್ಗೆ ರುದ್ರಮ್ಮರನ್ನು ಶ್ರೀಧರ್ ಅವರು ವಿಚಾರಿಸಿದಾಗ “ಯಾರೋ ಹುಡುಗ ಬಂದಿದ್ದ. ನನಗೆ ದೃಷ್ಟಿ ದೋಷವಿರುವುದರಿಂದ ಯಾರೆಂದು ತಿಳಿಯಲಿಲ್ಲ. ನಾನು ನೀವೇ ಬಂದಿರಬಹುದು ಎಂದು ಜಾತ್ರೆ ಮುಗಿಯಿತಾ? ಹೇಗಾಯಿತು ಎಂದು ಆತನಲ್ಲಿ ಕೇಳಿದ್ದೆ. ಆತನೂ ಮನೆಯವರಂತೆಯೇ ಮಾತನಾಡಿದ್ದ” ಎಂದು ತಿಳಿಸಿದ್ದರು. ಆಗ ಅನುಮಾನಗೊಂಡ ಶ್ರೀಧರ್ ಅವರು ಪರಿಶೀಲಿಸಿದಾಗ 30 ಗ್ರಾಂ ತೂಕದ ಚಿನ್ನದ ಸರ ಕಳವಾಗಿರುವುದು ತಿಳಿದುಬಂದಿದೆ.

    ಮನೆಯಲ್ಲಿರುವ ಎಲ್ಲ ಚಿನ್ನಾಭರಣಗಳನ್ನು ಕದಿಯುವ ಉದ್ದೇಶದಿಂದ ಕಳ್ಳ ಮನೆಗೆ ನುಗ್ಗಿರುವ ಸಾಧ್ಯತೆ ಇದ್ದು, ಶ್ರೀಧರ್ ದಿಢೀರನೆ ಮನೆಗೆ ಮರಳಿದ್ದರಿಂದ ಕೈಗೆ ಸಿಕ್ಕ ಸರವೊಂದನ್ನು ಮಾತ್ರ ಕದ್ದು ಪರಾರಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಇಲ್ಲವಾದಲ್ಲಿ ಮನೆಯಲ್ಲಿದ್ದ ಉಳಿದ ಚಿನ್ನಾಭರಣಗಳನ್ನು ಕಳ್ಳ ಕದ್ದೊಯ್ಯುವ ಸಾಧ್ಯತೆಯಿತ್ತು.

    ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    seven − 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.