Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಾಬು ಜಗಜೀವನರಾಂ, ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಡಾ. ಬಾಬು ಜಗಜೀವನರಾಂ, ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಏಪ್ರಿಲ್ 5 ರಂದು ಆಚರಿಸಲ್ಪಡುವ ಡಾ. ಬಾಬು ಜಗಜೀವನರಾಂ ಅವರ 118 ನೇ ಜಯಂತಿ ಹಾಗೂ ಏಪ್ರಿಲ್ 14 ರಂದು ಆಚರಿಸಲ್ಪಡುವ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕುರಿತ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಏಪ್ರಿಲ್ 5 ರಂದು ಬೆಳಗ್ಗೆ 10 ಗಂಟೆಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಚರಿಸಲಾಗುವುದು. ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಏಪ್ರೀಲ್ 14 ರಂದು ಬೆಳಗ್ಗೆ 10 ಕ್ಕೆ ನಗರದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಚರಿಸಲಾಗುವುದು. ಸಭಾ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಬುದ್ಧ ವಂದನೆ ಕಾರ್ಯಕ್ರಮ ನಂತರ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.

    ಡಾ. ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುವುದು ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಪ್ರತಿಭಾನ್ವಿತ ನಿಲಯಾರ್ಥಿಗಳನ್ನು, ನಗರಸಭೆಯ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುವುದು ಎಂದ ಅವರು, ಅಂತರ್ ಜಾತಿ ವಿವಾಹವಾದ ಮೂವರು ದಂಪತಿಗಳಿಗೆ ಪ್ರೋತ್ಸಾಹಧನವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು ಎಂದರು.

    ಬಾಬು ಜಗಜೀವನರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆಯ ದಿನಗಳಂದು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ನಿಯೋಜಿಸಬೇಕು. ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಾಗ ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ಆಹ್ವಾನ ಪತ್ರಿಕೆ, ವೇದಿಕೆ ಸಿದ್ದತೆ ಮಾಡಿಕೊಳ್ಳಬೇಕು ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲೆಯ ಎಲ್ಲ ತಾಲೂಕು ಕಚೇರಿ, ಶಾಲಾ-ಕಾಲೇಜು, ಗ್ರಾಮ ಪಂಚಾಯತಿ ಹಾಗೂ ಇತರೆ ಕಚೇರಿಗಳಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದ ಅವರು, ಡಾ.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ಶಾಲಾ, ಕಾಲೇಜು ಹಂತದಲ್ಲಿ ಭಾಷಣ, ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಕಳೆದ ಎರಡು ವರ್ಷಗಳಲ್ಲಿ ಲೋಕಸಭಾ, ವಿಧಾನ ಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ಮಹನೀಯರ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಈ ಬಾರಿ ಕಾರ್ಯಕ್ರಮವನ್ನು ಸಂಭ್ರಮದಿಂದ ಶಿಸ್ತುಬದ್ದವಾಗಿ ನಡೆಯಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ. ಅರುಣ್ ಕೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಎಂ., ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    ten + 5 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.