Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಬು ಜಗಜೀವನ ರಾಮ್ ಅವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾಗಿದೆ: ಕೋಟ ಶ್ರೀನಿವಾಸ ಪೂಜಾರಿ
    ಉಡುಪಿ ಜಿಲ್ಲೆ

    ಬಾಬು ಜಗಜೀವನ ರಾಮ್ ಅವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾಗಿದೆ: ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸಮಾನತೆ, ಅಸ್ಪೃಶ್ಯತೆ, ಜಾತಿಪದ್ಧತಿ ವಿರುದ್ಧ ಹೋರಾಡಿ, ದೀನದಲಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಅವಿರತವಾಗಿ ಶ್ರಮಿಸಿದ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ. ಬಾಬು ಜಗಜೀವನ ರಾಮ್ ರವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪ.ಜಾತಿ, ಪ.ಪಂಗಡಗಳ ಸಂಘಟನೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ರವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. 

    ಹಸಿರುಕ್ರಾಂತಿಯ ಹರಿಕಾರ, ಭಾರತದ ಉಪಪ್ರಧಾನಿಯಾದ ಡಾ. ಬಾಬು ಜಗಜೀವನ ರಾಮ್ ಜನ್ಮ ದಿಚಾರಣೆಯು ಒಂದು ವಿಶಿಷ್ಠವಾದ ಕಾರ್ಯಕ್ರಮವಾಗಿದ್ದು, ಸುಮಾರು ಒಂದು ಶತಮಾನದ ಹಿಂದೆ ಸಾಮಾಜಿಕ ನ್ಯಾಯದ ಕಲ್ಪನೆಯೇ ಇಲ್ಲದೇ, ಸಮಾಜದಲ್ಲಿ ಸಮಾನತೆ ಕನಸಾಗಿದ್ದ ಸಂದರ್ಭದಲ್ಲಿ ಅಸ್ಪೃಷ್ಯತೆ, ಜಾತಿಪದ್ಧತಿ ತಾಂಡವವಾಡುತ್ತಿದ್ದಾಗ ಇವುಗಳ ವಿರುದ್ಧ ಹೋರಾಡಿ, ಸಮಾಜದಲ್ಲಿ ಸಮಾನತೆಯನ್ನು ತಂದಿದ್ದಾರೆ. ಎಲ್ಲಾ ಅವಮಾನಗಳನ್ನು ಎದುರಿಸಿ, ಆತಂಕಗಳನ್ನು ನಿವಾರಿಸಿಕೊಂಡು ಅತ್ಯಂತ ಪ್ರಮುಖ ಸ್ಥಾನವನ್ನು ಅಲಂಕರಿಸುವುದರೊಂದಿಗೆ ಸಮಾಜದಲ್ಲಿ ಸಮಾನತೆಯ ಸಂಕೇತವಾದ ಸ್ಥಾನದಲ್ಲಿರುವವರಲ್ಲಿ ಜಗಜೀವನ್ ರಾಂ ಕೂಡ ಒಬ್ಬರಾಗಿದ್ದರು ಎಂದರು.

    ಬದುಕಿನ ಬಹು ಭಾಗವನ್ನು ಅಧಿಕಾರದಲ್ಲಿ ಕಳೆದರೂ ಸಹ ಸಮಾಜದ ಉನ್ನತಿಗಾಗಿ ತನ್ನ ಜೀವನವನ್ನು ಸಮರ್ಪಣೆ ಮಾಡಿದ್ದಾರೆ. ದೇಶದಲ್ಲಿ ಬರಗಾಲ ಬಂದ ಸಂದರ್ಭದಲ್ಲಿ ಕೃಷಿ ಮಂತ್ರಿ ಆಗಿದ್ದ ಅವರು ಯಾರೂ ಊಹಿಸದಂತಹ ರೀತಿಯಲ್ಲಿ ಆಹಾರದ ಉತ್ಪಾದನೆ ಹಾಗೂ ಆಹಾರದ ವಿತರಣೆ ಮಾಡಿದ್ದಾರೆ. ಕಾರ್ಮಿಕ ಮಂತ್ರಿಯಾಗಿದ್ದಾಗ ಸಮಾಜದ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಜನರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡಿದ್ದಾರೆ ಎಂದರು.

    ಡಾ. ಬಾಬು ಜಗಜೀವನ ರಾಮ್ ಅವರ ಆದರ್ಶಗಳನ್ನು ಪಾಲಿಸಿಕೊಂಡ ಬಂದ ಅನೇಕರು ಇಂದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರ ಕಾರ್ಯಶೈಲಿ, ಶ್ರದ್ಧೆ, ತೀಕ್ಷö್ಮ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದು, ಬದಲಾದ ಕಾಲಘಟ್ಟದಲ್ಲಿ ಇಂದಿಗೂ ಸಹ ಸಮಾಜ ಅವರನ್ನು ಅತ್ಯಂತ ಪ್ರೀತಿ, ಗೌರವ, ಅಭಿಮಾನ ಹಾಗೂ ಹೆಮ್ಮೆಯಿಂದ ಗುರುತಿಸಿ, ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.  

    Click here

    Click here

    Click here

    Click Here

    Call us

    Call us

    ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಸಮಕಾಲೀನರಾದ ಡಾ. ಬಾಬು ಜಗಜೀವನ ರಾಮ್ ರವರು ಕೇಂದ್ರದ ಕಾರ್ಮಿಕ ಹಾಗೂ ರಕ್ಷಣಾ ಸಚಿವರಾಗಿದ್ದಾಗ ದೂರದೃಷ್ಠಿಯಿಂದ ತೆಗೆದುಕೊಂಡ ನಿಲುವುಗಳು ಹಾಗೂ ರೂಪಿಸಿದ ಕಾನೂನುಗಳು ಆಡಳಿತ ವ್ಯವಸ್ಥೆಗೆ ಮಾದರಿಯಾಗುವಂತದ್ದು. ಬಾಬು ಜಗಜೀವನ ರಾಮ್ ರವರ ಕುರಿತು ಲೇಖನಗಳು, ಪುಸ್ತಕಗಳು, ಅವರ ಆದರ್ಶ, ಚಿಂತನೆಗಳು, ಜೀವನ ಶೈಲಿಯನ್ನು ಪ್ರತಿಯೊಬ್ಬ ಯುವ ಪೀಳಿಗೆಯು ಅವಲೋಕನ ಮಾಡುವುದರೊಂದಿಗೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

    ಅಜ್ಜರಕಾಡು ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ. ನಿಕೇತನ ವ್ಯಕ್ತಿಯೇ ಶಕ್ತಿಯಾದ ಡಾ. ಬಾಬು ಜಗಜೀವನ ರಾಮ್ ಅವರ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಸುಮಾರು ಮೂವತ್ತು ವರ್ಷಗಳ ಕಾಲ ವಿವಿಧ ಸಚಿವರಾಗಿ, ಉಪಪ್ರಧಾನಿಯಾಗಿ ಆಡಳಿತ ನಿರ್ವಹಿಸಿದ ಅವರು, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಸಮಾಜವಾದಿ ಸಿದ್ಧಾಂತದ ನಿಲುವಿನೊಂದಿಗೆ ಜೀವನವನ್ನು ಮುನ್ನಡೆಸಿಕೊಂಡು ಬಂದ ಧೀಮಂತ ಪ್ರತಿಭೆ. ಭಾರತ ಪ್ರಕಾಶಮಾನವಾಗಿರಲು ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಹೊಂದಿ ಅರ್ಹರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂಬ ಆಶಯ ಹೊಂದಿದ್ದರು ಎಂದರು.

    ಶತಮಾನದ ಹಿಂದೆ ಜಾತ್ಯಾತೀತ ನಿಲುವನ್ನು ಪ್ರತಿಪಾದನೆ ಮಾಡುವ ಸಂದರ್ಭದಲ್ಲಿ ವ್ಯಕ್ತಿಯಾಗಿ ಶಕ್ತಿಯಾಗಿ ಪ್ರಭಾವ ಬೀರಿದ್ದವರು ಅವರ ಪೋಷಕರು. ಬಾಲ್ಯದಲ್ಲಿಯೇ ತುಂಟಾಟದ ಹುಡುಗನಾಗಿದ್ದ ಜಗಜೀವನ ರಾಮ್ ರವರು ಪ್ರತಿಯೊಬ್ಬರ ಮಾತುಗಳನ್ನು ತಾಳ್ಮೆಯಿಂದ ಆಲಿಸುವ ಮನೋವ್ಯಕ್ತಿತ್ವ ಹೊಂದಿದ್ದರು. ಅವರ ಮಾನವೀಯ ನೆಲೆಯ ಆಲೋಚನೆಗಳು ರಾಜಕೀಯ ಹಾಗೂ ಸಾಮಾಜಿಕ ಜೀವನದಲ್ಲಿ ಎಲ್ಲರಿಗೂ ಪ್ರೇರಣೇಯಾಗಿದ್ದವು ಎಂದ ಅವರು, ನಮ್ಮ ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಸಹ ಇಂದಿಗೂ ಡಾ. ಬಾಬು ಜಗಜೀವನ ರಾಮ್ ಅವರನ್ನು ಧೀಮಂತ ನಾಯಕರಾಗಿ ಸ್ಮರಿಸಿಕೊಳ್ಳುತ್ತಿರವುದೇ ಅವರ ಆದರ್ಶಕ್ಕೆ ನಾವುಗಳು ನೀಡುವ ದೊಡ್ಡ ಉಡುಗೊರೆಯಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ಡಾ.ಉದಯ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಂಘಟನೆಗಳ ಮುಖಂಡರುಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.

    ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ ಎಂ., ಸ್ವಾಗತಿಸಿ, ವಂದಿಸಿದರು, ವಾರ್ಡನ್ ಶ್ರೀದೇವಿ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    19 + one =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.