Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಸಿ.ಇ.ಟಿ ಪರೀಕ್ಷೆಗೆ ಪ್ರತಿಬಂಧಕಾಜ್ಞೆ ಜಾರಿ – ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಉಡುಪಿ: ಸಿ.ಇ.ಟಿ ಪರೀಕ್ಷೆಗೆ ಪ್ರತಿಬಂಧಕಾಜ್ಞೆ ಜಾರಿ – ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ: 2025 ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು  ಏಪ್ರಿಲ್ 16 ಮತ್ತು 17 ರಂದು ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಪರೀಕ್ಷೆ ಸಂದರ್ಭದಲ್ಲಿ ದೋಷರಹಿತವಾಗಿ ನಡೆಸಲು, ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

    Click Here

    Call us

    Click Here

    ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರದೇಶವನ್ನು ನಿರ್ಬಂಧಿಸಿದೆ.

    ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಮುಚ್ಚಲು ಆದೇಶಿಸಿದೆ. ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ದಕಗಳ ಬಳಕೆಯನ್ನು ನಿರ್ಬಂಧಿಸಿದೆ. ಮೊಬೈಲ್/ ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೆöÊವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

    ಎಲ್ಲಾ ಪರೀಕ್ಷಾ ಸಿಬ್ಬಂದಿ/ಅಭ್ಯರ್ಥಿಗಳು ಮೊಬೈಲ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಸದರಿ ಆದೇಶವು ಕಾರ್ಯನಿರತ ಪರೀಕ್ಷಾ ಅಧಿಕಾರಿ / ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಈ ನಿಷೇಧಾಜ್ಞೆ ಆದೇಶವು ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಏ. 16 ಹಾಗೂ 17 ರಂದು ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    16 + 18 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.