ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮವು ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು.
ಕಾಲೇಜಿನ ಸಂಚಾಲಕರಾದ ಅಪ್ಪಣ್ಣ ಹೆಗ್ಡೆ, ಪ್ರಾಸ್ತಾವಿಕ ಮಾತನಾಡಿ, ಮಕ್ಕಳು ಉತ್ತಮವಾದ ಹವ್ಯಾಸಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನಸಿಕ ದೃಢತೆಯನ್ನು ಬೆಳೆಸಬೇಕು ಎಂದು ಹೇಳಿದರು.
ಮಾನ್ಯ ಅತಿಥಿಗಳಾಗಿ ಆಗಮಿಸಿದ ವಿಶ್ರಾಂತ ಪ್ರಾಂಶುಪಾಲರಾದ ಹಾಗೂ ಮಾಹೆಯ ಆಡಳಿತಾಧಿಕಾರಿಯಾದ ಡಾ. ವಿ. ಜಗದೀಶ ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದರ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಬೇಕು. ಶಿಕ್ಷಣ ಮಕ್ಕಳ ಪರಿಪೂರ್ಣತೆ, ಆತ್ಮ ವಿಶ್ವಾಸ, ಸ್ವತಂತ್ರವಾದ ತಿಳುವಳಿಕೆ, ಸೇವಾ ಮನೋಭಾವ ದೇಶಾಭಿಮಾನ, ಬೆಳೆಸುವಂತೆ ಮಾಡಬೇಕು ಹಾಗೂ ಶಿಕ್ಷಕರು ಮಕ್ಕಳಲ್ಲಿ ಜ್ಞಾನ ಹೆಚ್ಚಿಸುವ, ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದರು.
ಕಾಲೇಜಿನ ಪ್ರಾಕ್ತಾನ ವಿದ್ಯಾರ್ಥಿ ಮತ್ತು ಎಕ್ಸಪರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಕರುಣಾಕರ ಬಳ್ಕೂರು ಸ್ವಸ್ತಿ ವಾಚನ ಗೈದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಲೇಜಿನ ಟ್ರಸ್ಟಿ ಅಧ್ಯಕ್ಷರಾದ ಕೆ. ಜಯಕರ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟಿ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು. ಮತ್ತು ದತ್ತಿನಿಧಿ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಪ್ರಮಿಳಾ ಮತ್ತು ಗಣಕ ವಿಜ್ಞಾನ ಉಪನ್ಯಾಸಕಿ ಮನವಿ ಕೆ. ಕೆ. ನಿರೂಪಿಸಿ, ಕನ್ನಡ ಸಹಾಯಕ ಪ್ರಾಧ್ಯಾಪಕ ಕುಮಾರ ಪಿ ವಂದಿಸಿದರು.
****















