Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ: ಮಲತ್ಯಾಜ್ಯ ವಿಲೇವಾರಿ ಘಟಕಕ್ಕೆ ವಿರೋಧ 
    ಊರ್ಮನೆ ಸಮಾಚಾರ

    ಬ್ರಹ್ಮಾವರ: ಮಲತ್ಯಾಜ್ಯ ವಿಲೇವಾರಿ ಘಟಕಕ್ಕೆ ವಿರೋಧ 

    Updated:06/05/2025No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಕಾವಡಿ ಪ್ರಾಥಮಿಕ ಉಪಕೇಂದ್ರದ ಸಮೀಪ ನಡೆಯಿತು.

    Click Here

    Call us

    Click Here

    ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಪ್ರಮುಖರಾದ ಉದಯಶ್ಚಂದ್ರ ಶೆಟ್ಟಿ, ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ಪರವಾಗಿ ಆಕ್ಷೇಪ ವ್ಯಕ್ತಪಡಿಸಿ ಗ್ರಾಮವು ತನ್ನದೇ ಆದ ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ ಇಲ್ಲಿಯ ಶೇಕಡ ೯೦% ಭಾಗ ಜನರು ಹೆಚ್ಚಾಗಿ ಕೃಷಿ ಹಾಗೂ ಹೈನುಗಾರಿಕೆಯನ್ನು ಅವಲಂಬಿತರಾಗಿದ್ದಾರೆ.ಇಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯನ್ನು ಹೊಂದಿದ್ದು, ಜನನಿಬಿಡರು ವಸತಿಯನ್ನು ಹೊಂದಿದ್ದು, ಅಂಗನವಾಡಿ ಕೇಂದ್ರ, ಸಮುದಾಯ ಆರೋಗ್ಯ ಉಪಕೇಂದ್ರ ಮತ್ತು ಶತಮಾನಕ್ಕೂ ಹಳೆಯದಾದ ದೇವಸ್ಥಾನ, ದೈವಸ್ಥಾನ, ಹಾಗೂ ಗರಡಿಯನ್ನು ಹೊಂದಿದ್ದು, ಇಲ್ಲಿಯ ಜನರು ಹೆಚ್ಚಾಗಿ ಬಾವಿ ಹಾಗೂ ಕೆರೆಯ ನೀರನ್ನು ಕೃಷಿ ಮಾಡಲು ಮತ್ತು ಕುಡಿಯುವ ಬಗ್ಗೆ ನೀರನ್ನು ಉಪಯೋಗಿಸುತ್ತಿದ್ದಾರೆ, 

    ಹೀಗಿರುವಾಗ ಸಾರ್ವಜನಿಕರಿಗೆ ಯಾವುದೇ ಸದ್ದಿಲದೆ,ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡುವ ವಿಚಾರ ಬೆಳಕಿಗೆ ಬಂದಿದೆ, ಇಂತಹ ಘಟಕ ನಿರ್ಮಾಣದಿಂದ ನಮ್ಮ ಗ್ರಾಮಕ್ಕೆ ಮಲೇರಿಯಾ, ಡೆಂಗ್ಯೂ, ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಂದ ಚಿಕ್ಕ ಮಕ್ಕಳಿಗೆ, ವಯಸ್ಕರಿಗೆ, ಮಹಿಳೆಯರಿಗೆ ಆರೋಗ್ಯದಲ್ಲಿ ತೊಂದರೆಯಾಗುವ ಸಾಧ್ಯತೆ ಇದೆ, ಇದರ ವಾಸನೆಯಿಂದ ನಮ್ಮ ಗ್ರಾಮಸ್ಥರ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರುವುದು ಖಂಡಿತ ಅದಲ್ಲದೇ ಕುಡಿಯುವ ನೀರಿಗಾಗಿ ಬಾವಿಯನ್ನು ಅವಲಂಬಿಸುವ ಕಾವಡಿ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ.

    ಇದನ್ನೆಲ್ಲ ಮನಗಂಡು ತಾವು ನಮ್ಮ ಗ್ರಾಮಕ್ಕೆ ಕಿಂಚಿತ್ತು ಅವಶ್ಯಕತೆಯಿಲ್ಲದ ಈ ಮಲತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡುವ ನಿರ್ಣಯವನ್ನು ಈ ಕೂಡಲೇ ಕೈಬಿಡಬೇಕು, ಕಾವಡಿ ಗ್ರಾಮ ಜನರ ನೆಮ್ಮದಿ ಕೆಡಿಸಲು ಮುಂದಾಗಬೇಡಿ, ಒಂದೊಮ್ಮೆ ಗ್ರಾಮಸ್ಥರ ಮನವಿ ಲಕಿಸದೆ ನಿರ್ಮಾಣ ಕಾರ್ಯಮಾಡಿದರೆ ಉಗ್ರಸ್ವರೂಪದ ಹೋರಾಟಕ್ಕಿಳಿಯಬೇಕಾದಿತು ಎಂದು ಸಭೆಯಲ್ಲಿ ಎಚ್ಚರಿಸಿದರು.

    ಪ್ರತಿಭಟನಾ ಸಭೆಯಲ್ಲಿ ಭಾಗಿಯಾದ ವಡ್ಡರ್ಸೆ ಗ್ರಾಮಪಂಚಾಯತ್ ಅಧ್ಯಕ್ಷ ಲೋಕೇಶ್ ಕಾಂಚನ್ ನಮ್ಮ ಗ್ರಾಮದಲ್ಲಿ ಇನ್ನೊಂದು ಭಾಗದ ಮಲವನ್ನು ತಂದು ಇಲ್ಲಿ ನಿರ್ವಹಣಾ ಘಟಕ ನಿರ್ಮಿಸುವ ಅಗತ್ಯವಿಲ್ಲ ಗ್ರಾಮಪಂಚಾಯತ್ ಗೆ ಮಾಹಿತಿ ಇಲ್ಲದೆ ಜಿಲ್ಲಾಧಿಕಾರಿಗಳ ಈ ತಿರ್ಮಾನಕ್ಕೆ ಜನಪ್ರತಿನಿಧಿಗಳಾಗಿ ಹಾಗೂ ಸ್ಥಳೀಯಾಡಳಿತ ಯಾವುದೇ ಸಮ್ಮತಿ ನೀಡುವುದಿಲ್ಲ ಜನರ ಭಾವನೆಗಳಿಗೆ ಬೆಲೆ ನೀಡಿ ಈ ಯೋಜನೆಯನ್ನು ಈಗಿಂದಿಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

    Click here

    Click here

    Click here

    Click Here

    Call us

    Call us

    ಮುಂಜಾನೆಯಿಂದ ಆರಂಭಗೊಂಡ ಪ್ರತಿಭಟನೆಯಲ್ಲಿ ಬ್ರಹ್ಮಾವರ ತಹಶಿಲ್ದಾರ್  ಶ್ರೀಕಾಂತ್ ಎಸ್ ಹೆಗ್ಡೆ ಆಗಮಿಸುತ್ತಿದ್ದಂತೆ ಪ್ರತಭಟನಾಕಾರರ ಘೋಷಣೆ ಮುಗಿಲುಮುಟ್ಟಿತು.ಈ ವೇಳೆ  ಗ್ರಾಮಸ್ಥರ ಮನವಿ ಸ್ವೀಕರಿಸಿ ಮಾತನಾಡಿ ಘಟಕದ ಬಗ್ಗೆ ಈಗಾಲೇ ಸ್ಥಳ ಪರಿಶೀಲನೆ ಪೂರ್ವಗೊಂಡಿದೆ ಪ್ರಸ್ತುತ ನಿಮ್ಮ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗುವುದು ಮುಂದಿನ ಕ್ರಮಗಳನ್ನು ಅವರೇ ಕೈಗೊಳ್ಳಲಿದ್ದಾರೆ ಎಂದರು.

    ಮಲತ್ಯಾಜ್ಯ ಘಟಕ ಮಾಡುವ ಬಗ್ಗೆ ಯಾವುದೇ ರೀತಿಯ ಮಾಹಿತಿಇದುವರೆಗೆ ಗ್ರಾಮಸ್ಥರಿಗೆ ತಿಳಿಸಿಲ್ಲ ಜನರ ಭಾವನೆಗಳ ಜತೆ ಚಲ್ಲಾಟ ನಿಲ್ಲಿಸಿ, ಒಂದೊಮ್ಮೆ ಇಲ್ಲೇ ಘಟಕ ನಿರ್ಮಾಣ ಕೈಗೊಂಡರೆ ಜೀವದ ಹಂಗು ತೊರೆದು ಹೋರಾಟಕ್ಕೆ ಇಳಿಯುವುದಂತು ಸತ್ಯ.

    ಈ ಸಂದರ್ಭದಲ್ಲಿ ವಡ್ಡರ್ಸೆ ಗ್ರಾಮಪಂಚಾಯತ್ ಸದಸ್ಯರಾದ ಉದಯ್ ಕುಲಾಲ್,ರೇಖಾ ಶರತ್ ಶೆಟ್ಟಿ,ಕುಶಲ ಶೆಟ್ಟಿ,ಮಾಜಿ ತಾ.ಪಂ ಸದಸ್ಯ ಉಲ್ಲಾಸ್ ಶೆಟ್ಟಿ, ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿಯ ಪ್ರಮುಖರಾದ  ಗೋಪಾಲಕೃಷ್ಣ ಕಾಂಚನ್, ಅಣ್ಣಪ್ಪ ಪೂಜಾರಿ ,ರಮೇಶ್ ರಾವ್, ಚಂದ್ರಶೇಖರ್ ಶೆಟ್ಟಿ,ಪ್ರಭಾಕರ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ,ಶರತ್ ಶೆಟ್ಟಿ,ಗುರುರಾಜ್ ಕಾಂಚನ್,ಜೀವನ್ ಕುಮಾರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.