ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಇಡೂರು-ಕುಂಜ್ಞಾಡಿ ಗ್ರಾಮದ ಜನ್ನಾಲ್ ರಾಜ್ಯ ಹೆದ್ದಾರಿಯಲ್ಲಿ ಮಿನಿ ಗೂಡ್ಸ್ ವಾಹನ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ಇತ್ತೀಚಿಗೆ ನಡೆದಿದೆ.
ಕೊಲ್ಲೂರಿನಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಮಿನಿ ಗೂಡ್ಸ್ ವಾಹನ ಆಲ್ಟೋ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಜೋಸ್ ಪಿಟಿ ಯಾನೆ ರಿನ್ನೊ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಯ ಬಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಕಾರಿನಲ್ಲಿ ಪ್ರಯಣಿಸುತ್ತಿದ್ದ ತ್ರೇಸಿಯಮ್ಮ ಯಾನೆ ಶಾಂತಿ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮಿನಿ ಗೂಡ್ಸ್ ವಾಹನ ಚಾಲಕ ಶಬರೀಶ ಕೂಡ ಗಾಯಗೊಂಡಿದ್ದು, ಅವರು ಒಳರೋಗಿಯಾಗಿ ದಾಖಲಾಗಿದ್ದಾರೆ.
ಈ ಬಗ್ಗೆ ಕೊಲ್ಲೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










