ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ರೈತ ಕಾಯಕವಿದ್ದರೆ ಮಾತ್ರ ಮನುಕುಲ ಉಳಿಯಲು ಸಾಧ್ಯ ಇಲ್ಲವಾದಲ್ಲಿ ಕ್ಲಿಷ್ಟಕರ ದಿನಗಳನ್ನು ಕಾಣಬೇಕಾದಿತು ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಹೇಳಿದರು.
ಅವರು ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 46ನೇ ಮಾಲಿಕೆ ಐರೋಡಿ ರಘುರಾಮ ಮಡಿವಾಳ ಇವರನ್ನು ಗೌರವಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರೈತ ಬೆಳೆದರೆ ದೇಶ ಅಥವಾ ಮನುಷ್ಯ ಜೀವಿಸಲು ಸಾಧ್ಯ ಈ ನಿಟ್ಟಿನಲ್ಲಿ ಕೃಷಿ ಕಾಯಕದಿಂದ ವಿಮುಖರಾಗದಂತೆ ಪ್ರತಿಯೊಬ್ಬರು ಯೋಚಿಸಬೇಕಿದೆ, ಅದರಲ್ಲೂ ಪಂಚವರ್ಣ ಸಂಘಟನೆ ರೈತರೆಡೆಗೆ ಕಾರ್ಯಕ್ರಮ ಮನೆ ಮನಮುಟ್ಟಯವಂತ್ತಾಗಿದೆ ಸಮಾಜಿಕ ಬದ್ದತೆಯಲ್ಲಿ ಪಂಚವರ್ಣ ಇತಿಹಾಸ ಸೃಷ್ಟಿಸಲು ಸಜ್ಜಾಗಿರುವುದು ಶ್ಲಾಘನೀಯ, ಯುವ ಸಮೂಹ ಹೆಚ್ಚು ಹೆಚ್ಚು ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವಂತಾಗಬೇಕೇಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರೈತ ಸಾಧಕ ರಘುರಾಮ ಮಡಿವಾಳ ದಂಪತಿಗಳನ್ನು ಕೃಷಿ ಪರಿಕರಗಳನ್ನಿತ್ತು ಗೌರವಿಸಲಾಯಿತು. ರೈತರೆಡೆಗೆ ಕಾರ್ಯಕ್ರಮದ ವಿಶೇಷತೆಯ ಅಂಗವಾಗಿ ಗೋ ಪೂಜೆ ನೆರವೆರಿಸಿಕೊಂಡು ಗಿಡ ನೆಟ್ಟು ಪರಿಸರ ಜಾಗೃತಿ ಮೆರೆಯಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಸ್ಥಳೀಯ ಸಾಂಸ್ಕೃತಿಕ ಚಿಂತಕ ಭೀಷ್ಮಗೋಪಾಲ್, ಸ್ನೇಹಕೂಟದ ಕೋಶಾಧಿಕಾರಿ ವಿಜಯಲಕ್ಷ್ಮಿ ಭಟ್, ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಪೂರ್ವಾಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.
ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ಯುವಕ ಮಂಡಲದ ಸದಸ್ಯ ಮಹೇಶ್ ಬೆಳಗಾವಿ ವಂದಿಸಿದರು.















