Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಕ್ರೀದ್ ಆಚರಣೆಯ ವೇಳೆ ಅನಧೀಕೃತ ಜಾನುವಾರು ವಧೆ, ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಜಾರಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಬಕ್ರೀದ್ ಆಚರಣೆಯ ವೇಳೆ ಅನಧೀಕೃತ ಜಾನುವಾರು ವಧೆ, ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಜಾರಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ನಡೆದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗಧಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಸದ್ರಿ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು.

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದನ, ಎಮ್ಮೆ,ಕರು ಹಾಗೂ ಒಂಟೆಗಳನ್ನು ಅಕ್ರಮವಾಗಿ ದಾಸ್ತಾನು ಸಾಗಾಣಿಕೆ ಹಾಗೂ ವಧೆ ಮಾಡುವ ಸಾಧ್ಯತೆ ಇರುವುದರಿಂದ ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ವಿವಿಧ ಅಧಿಕಾರಿಗಳನ್ನು ಒಳಗೊಂಡ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಇದಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ತಮ್ಮ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಪ್ರವೃತ್ತರಾಗಿರಬೇಕು ಎಂದ ಅವರು, ತಾಲೂಕು ಮಟ್ಟದಲ್ಲಿ ರಚಿಸಲಾಗಿರುವ ತಂಡಗಳು ಸಭೆ ಸೇರಿ, ಇವುಗಳ ನಿಯಂತ್ರಣ ಕಾರ್ಯದ ಬಗ್ಗೆ ಚರ್ಚಿಸಿ, ಕ್ರಮವಹಿಸಬೇಕು ಎಂದರು.

    ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಿ, ಹತ್ತಿರದ ಗೋಶಾಲೆಗೆ ಬಿಡಲು ಸಮೀಪದ ಗೋಶಾಲೆಗಳನ್ನು ಗುರುತಿಸುವಂತೆ ಹಾಗೂ ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಲು ಪಶುವೈದ್ಯಾಧಿಕಾರಿಗಳು ಸನ್ನದ್ಧರಾಗಿರಬೇಕು ಹಾಗೂ ಜಾನುವಾರುಗಳಿಗೆ ಅಗತ್ಯವಿರುವ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

    Click here

    Click here

    Click here

    Click Here

    Call us

    Call us

    ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ನಡೆಯಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರರುಗಳು ಶಾಂತಿ ಸಭೆಗಳನ್ನು ನಡೆಸಬೇಕು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

    ಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಜಿಲ್ಲಾದ್ಯಂತ ತಪಾಸಣಾ ಕೇಂದ್ರಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ. ಸದ್ರಿ ಕೇಂದ್ರಗಳು ಜಾನುವಾರು ಸಾಗಾಣಿಕೆ ಮಾಡುವ ಕುರಿತು ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಕಾನೂನು ಉಲ್ಲಂಘನೆ ಮಾಡಿ ಜಾನುವಾರು ಸಾಗಣಿಕೆ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುದು ಎಂದರು.

    ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ನಗರಸಭೆ ಆಯುಕ್ತ ಮಹೇಶ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    two × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.