Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 63,750 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ. ಗೆ 1275 ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ.

    Click Here

    Call us

    Click Here

    ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

    ಅಧಿಸೂಚಿತ ಘಟಕದಲ್ಲಿ ಬೆಳೆ ವಿಮಾ ಯೋಜನೆಯ ಪರಿಹಾರ ವ್ಯಾಪ್ತಿಗಳು : ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಅಧಿಸೂಚಿತ ಘಟಕದಲ್ಲಿ ಶೇ. 75 ರಷ್ಟು ಭಿತ್ತನೆಯಾಗದಿದ್ದಲ್ಲಿ ವಿಮೆ ಮಾಡಿಸಿದ ರೈತರಿಗೆ ವಿಮಾ ಮೊತ್ತದ ಶೇ. 25 ರಷ್ಟು ಪರಿಹಾರ ದೊರೆಯಲಿದೆ.

    ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ನೆರೆ/ಪ್ರವಾಹದಿಂದ ಬೆಳೆ ಮುಳುಗಡೆ, ದೀರ್ಘಕಾಲ ತೇವಾಂಶ ಕೊರತೆ, ತೀವ್ರ ಬರಗಾಲ ಮುಂತಾದವುಗಳಿಂದ ಬಿತ್ತನೆಯಾದ ಒಂದು ತಿಂಗಳಿನಿAದ ಕಟಾವಿನ 15 ದಿನ ಪೂರ್ವದವರೆಗಿನ ಬೆಳೆಯಲ್ಲಿ ಬೆಳೆ ನಷ್ಟವಾಗಿ ನಿರೀಕ್ಷಿತ ಇಳುವರಿಯು, ಸಾಮಾನ್ಯ ಇಳುವರಿಯ ಶೇ.50 ಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬೆಳೆ ನಷ್ಟ ಕಂಡುಬಂದಲ್ಲಿ ವಿಮೆ ಮಾಡಿದ ರೈತರಿಗೆ ಅಂದಾಜು ಮಾಡಲಾದ ಬೆಳೆ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣ ಮುಂಚಿತವಾಗಿ ದೊರೆಯಲಿದೆ. ಬೆಳೆ ಕಟಾವಿನ ವಾಸ್ತವಿಕ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಟ ಪರಿಹಾರದಲ್ಲಿ ಹೊಂದಾಣಿಕೆ ಮಾಡಲಾಗುವುದು.

    ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಮೇಘಸ್ಫೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡಗಳಿಂದ ಬೆಳೆ ಹಾನಿಯಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದ್ದು, ಅಧಿಸೂಚಿಸಿದ ಘಟಕದಲ್ಲಿ ಶೇ.25 ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ನಷ್ಟವಾದಲ್ಲಿ ವಿಮೆಗೆ ಒಳಪಟ್ಟ ಬೆಳೆ ನಷ್ಟದ ವರದಿ ಮಾಡಿದ ರೈತರಿಗೆ ಮಾದರಿ ಸಮೀಕ್ಷೆಗೆ ಅನುಗುಣವಾಗಿ ಪರಿಹಾರ ನೀಡಲಾಗುವುದು.

    Click here

    Click here

    Click here

    Click Here

    Call us

    Call us

    ಕಟಾವಿನ ನಂತರದ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಹಾಗೂ ಕಟಾವು ಕೈಗೊಳ್ಳುವ 14 ದಿನಗಳ ಒಳಗೆ ಚಂಡಮಾರುತ, ಅಕಾಲಿಕ ಮಳೆಯಿಂದ ಬೆಳೆ ನಾಶವಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಮೇಲಿನ ಎರಡೂ ಸಂದರ್ಭದಲ್ಲಿ ರೈತರು ವಿಮಾ ಸಂಸ್ಥೆ / ಆರ್ಥಿಕ ಸಂಸ್ಥೆ ಅಥವಾ ಕೃಷಿ ಇಲಾಖಾ ಕಚೇರಿಗೆ 72 ಗಂಟೆಗಳ ಒಳಗಾಗಿ ಬೆಳೆ ಹಾನಿ ವಿವರದ ಮಾಹಿತಿ ಒದಗಿಸಬೇಕು.

    ಪ್ರಸಕ್ತ ಸಾಲಿನ ಪಿ.ಎಂ.ಎಫ್.ಬಿ.ವೈ ಯೋಜನೆ ಅನುಷ್ಠಾನಗೊಳಿಸುವ ವಿಮಾ ಕಂಪನಿಯು ಇಫ್ಕೋ ಟೋಕಿಯೋ ಜನರಲ್ ಇನ್ಶುರೆನ್ಸ್ ಕಂಪೆನಿಯಾಗಿದೆ. ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಚಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡಲು ಕೋರಬೇಕು.

    ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಛೇರಿ, ವಾಣಿಜ್ಯ ಬ್ಯಾಂಕ್ ಅಥವಾ ಸಂಬಂಧಿಸಿದ ಸೇವಾ ಸಹಕಾರ ಸಂಘಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    4 + 13 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.