ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪಿ.ಹೆಚ್.ಡಿ ಮೂರು ವರ್ಷ ಅವಧಿಗೆ ಫೆಲೋಶಿಪ್ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಕ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.









