Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ವತಿಯಿಂದ ಸಂಜಯ ಗಾಂಧಿ ಶಾಲೆ‌ಗೆ ಗ್ರೀನ್ ಬೋರ್ಡ್ ವಿತರಣೆ
    ಊರ್ಮನೆ ಸಮಾಚಾರ

    ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ವತಿಯಿಂದ ಸಂಜಯ ಗಾಂಧಿ ಶಾಲೆ‌ಗೆ ಗ್ರೀನ್ ಬೋರ್ಡ್ ವಿತರಣೆ

    Updated:01/07/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ‌ ಹಾಗೂ ಪ್ರೌಢಶಾಲೆ ಇಲ್ಲಿನ ವಿದ್ಯಾದಾಯಿನಿ ಸಭಾಭವನದಲ್ಲಿ ಈ ದಿನ ವಿಜ್ಞಾನ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ಮತ್ತು ತರಗತಿಗಳಿಗೆ ಗ್ರೀನ್ ಬೋರ್ಡ್ ಗಳನ್ನು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಇವರ ವತಿಯಿಂದ ನೀಡಲಾಯಿತು.

    Click Here

    Call us

    Click Here

    ರೋಟರಿ ಕುಂದಾಪುರ ಮಿಡ್ ಟೌನ್ ಇದರ ಅಧ್ಯಕ್ಷರಾದ ರೊಟೇರಿಯನ್ ಶೇಖರ್. ಎನ್. ಶೆಟ್ಟಿ aವರು ತಮ್ಮ ಅಧ್ಯಕ್ಷೀಯ ಅವಧಿಯ ಕೊನೆಯ ದಿನದ ಕೊನೆಯ ಕಾರ್ಯಕ್ರಮವನ್ನು ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ, ಮಕ್ಕಳಿಗೆ ಉತ್ತಮ ಕಿವಿಮಾತು ಹೇಳುವ ಮೂಲಕ ನಡೆಸಿಕೊಟ್ಟರು ಮತ್ತು ಇದರೊಂದಿಗೆ ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ಮಾಡಿದ ಅನೇಕಾನೇಕ ಸಮಾಜ ಸೇವೆಗಳಿಂದ ಸಾರ್ಥಕತೆ ಕಂಡು ಕೊಂಡಿರುವುದಾಗಿ ತಿಳಿಸಿದರು.

    ಗ್ರಾಮೀಣ ಭಾಗದ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯದ ಕನಸು ನನಸಾಗಿಸುವಲ್ಲಿ ರೊಟೇರಿಯನ್ ಶೇಖರ್. ಎನ್. ಶೆಟ್ಟಿ ಅವರ ದೇಣಿಗೆ ಬೃಹತ್ ಕೊಡುಗೆಯಾಗಿದೆ ಎಂದು ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಅವರು ತಿಳಿಸಿದರು.

    ಟ್ರಸ್ಟ್ ನ ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಅವರು ಪ್ರಾಸ್ತಾವಿಕ ನುಡಿಯಲ್ಲಿ ಶಾಲೆಯ ಸಾಧನೆ, ಶಾಲಾ ನಿರ್ವಹಣೆಯಲ್ಲಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ತಿಳಿಸಿ, ಟ್ರಸ್ಟ್  ಶಾಲೆಯ ಚುಕ್ಕಾಣಿ ಹಿಡಿದುದರ ಉದ್ದೇಶ, ಶಾಲೆಯ ಧ್ಯೇಯಗಳ ಬಗ್ಗೆ ಮಾತನಾಡಿದರು.

    ಶಾಲಾ ಆಡಳಿತಾಧಿಕಾರಿ ಮತ್ತು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ವಿಜ್ಞಾನ ಪ್ರಯೋಗಾಲಯಕ್ಕೆ ನೀಡಿದ ಉಪಕರಣಗಳನ್ನು ಸ್ವೀಕರಿಸಿದರು.

    Click here

    Click here

    Click here

    Click Here

    Call us

    Call us

    ಚೈತ್ರ ಯಡಿಯಾಳ ಅವರು ಪ್ರಯೋಗಾಲಯದ ಅಗತ್ಯವನ್ನು ತಿಳಿಸಿ, ಇಂದಿನ ದೇಣಿಗೆಯಿಂದ ಮಕ್ಕಳು ವಿಜ್ಞಾನದ ಬಗ್ಗೆ ಕುತೂಹಲ, ಆಸಕ್ತಿ ಬೆಳೆಸಿಕೊಳ್ಳಲು ಅನುವು ಮಾಡಿಕೊಡುತ್ತದೆ.ಇದರಿಂದ ಮುಂದೆ ಮಕ್ಕಳಿಗೆ ವಿಜ್ಞಾನ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರ ಮಾಡಲು ಪ್ರೇರೇಪಿಸುತ್ತದೆ ಎಂದರು.

    ಇದೇ ಸಂದರ್ಭದಲ್ಲಿ ಸಂಜಯಗಾಂಧಿ ಪ್ರೌಢಶಾಲಾ ವಿದ್ಯಾರ್ಥಿ ಚಂದನ ಅವರಿಗೆ ರಾಷ್ಟ್ರ ಮಟ್ಟದ ಎನ್‌ಎಮ್‌ಎಮ್‌ಎಸ್‌ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವುದಕ್ಕೆ ಮುಖ್ಯೋಪಾಧ್ಯಾಯರಾದ ಉದಯ್ ಕುಮಾರ್ ಅವರು ಅಭಿನಂದನೆ ಸಲ್ಲಿಸಿದರು  ಮತ್ತು ರೊಟೇರಿಯನ್ ಜಯಪ್ರಕಾಶ್ ಶೆಟ್ಟಿ ಅವರು ಚಂದನ್ ಅವರಿಗೆ ಸನ್ಮಾನಿಸಿದರು.

    ಕಾರ್ಯಕ್ರಮದಲ್ಲಿ ರೋಟರಿ ಕುಂದಾಪುರ ಮಿಡ್ ಟೌನ್ ನ ಮುಂದಿನ ನೂತನ ಅಧ್ಯಕ್ಷರು, ಕಾರ್ಯದರ್ಶಿಯವರು ಮತ್ತು ಇತರ ರೊಟೇರಿಯನ್ಸ್, Rtn ಅಬ್ದುಲ್ ಬಷೀರ್, Rtn ಸುಕುಮಾರ್ ಶೆಟ್ಟಿ, Rtn. ನಿರಂಜನ್, Rtn ಉದಯ್ ಕಮಾರ ಶೆಟ್ಟಿ, Rtn ಸುನಿಲ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ವತಿಯಿಂದ ಮಕ್ಕಳಿಗೆ ಸಿಹಿ ಹಂಚಲಾಯಿತು.  ಶಾಲಾ ಸಂಯೋಜಕಿ ಸರೋಜ ಅವರು ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯಿನಿ ವಿಲಾಸಿನಿ ಶೆಟ್ಟಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    12 + 16 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.