ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶಿಕ್ಷಕ-ರಕ್ಷಕ ಸಮಿತಿಯ 2025-26ನೇ ಸಾಲಿನ ಪ್ರಥಮ ಸಭೆ ಗಂಗೊಳ್ಳಿ ಎಸ್.ವಿ. ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಕೋಸ್ಟ ಶಾಲಾ ನಿಯಮಗಳ ಮಾಹಿತಿ ನೀಡಿದರು.
ಈ ವೇಳೆ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಕೆಜಿ ವಿಭಾಗದ ಉಸ್ತುವಾರಿ ಶಿಕ್ಷಕಿ ದಿವ್ಯಶ್ರೀ ಸ್ವಾಗತಿಸಿದರು. ಶಿಕ್ಷಕಿ ಗೀತಾ. ಸಹಶಿಕ್ಷಕಿ ಉಷಾ ಕಾರ್ಯಕ್ರಮ ನಿರ್ವಹಿಸಿದರು.










