Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಏಕವಿನ್ಯಾಸ ನಕ್ಷೆ, ನಮೂನೆ 9/11 ರ ಹೊಸ ಅಧಿಸೂಚನೆಯಲ್ಲಿ ಕೆಲವು ವಿನಾಯಿತಿ ಅಗತ್ಯ: ಸಂಸದ ಕೋಟ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಏಕವಿನ್ಯಾಸ ನಕ್ಷೆ, ನಮೂನೆ 9/11 ರ ಹೊಸ ಅಧಿಸೂಚನೆಯಲ್ಲಿ ಕೆಲವು ವಿನಾಯಿತಿ ಅಗತ್ಯ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ರನ್ನು ಹೊಸ ಅಧಿಸೂಚನೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲು ಸಮಸ್ಯೆ ಉಂಟಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಕೆಲವೊಂದು ವಿನಾಯಿತಿ ನೀಡಲು ಸರಕಾರದೊಂದಿಗೆ ಚರ್ಚಿಸಲಾಗುವುದು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ಅನ್ನು ಪಡೆಯಲು ಜನಸಾಮಾನ್ಯರು ಸಂಬಂಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಿದರೂ ಅವುಗಳನ್ನು ಪಡೆಯಲು ವಿಳಂಬವಾಗುತ್ತಿದೆ. ತಿಂಗಳುಗಟ್ಟಲೇ ಸುತ್ತಾಡಿದರೂ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಹೊಸ ಅಧಿಸೂಚನೆಯ ಪ್ರಕಾರ ಎಲ್ಲಾ ಅರ್ಜಿಗಳನ್ನು ಅನುಮೋದನೆ ನೀಡಲೂ ಸಹ ಕಷ್ಟಸಾಧ್ಯವಾಗುತ್ತಿದೆ. ಇದಕ್ಕೆ ಸರಕಾರ ಕೆಲವೊಂದು ವಿನಾಯಿತಿಗಳನ್ನು ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ರಕರಣ ಎಂದು ತಿಳಿದು ನೀಡುವ ಅಗತ್ಯವಿದೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯ ಜನ ಸಾಮಾನ್ಯರಿಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ಮತ್ತಿತರ ದಾಖಲೆಗಳನ್ನು ಪಡೆಯಲು ಆಗುತ್ತಿರುವ ತೊಂದರೆಯ ಬಗ್ಗೆ ಸರಕಾರದ ಗಮನಕ್ಕೆ ತರಲು ಜಿಲ್ಲೆಯ ಬಾಗೀಧಾರರ ಸಭೆಯನ್ನು ಕರೆದು ಅವರ ಅಹವಾಲುಗಳನ್ನು ಕೇಳಿ, ಸಮಸ್ಯೆಗಳ ಪಟ್ಟಿಯನ್ನು ಕ್ರೂಢೀಕರಣವನ್ನು ಮುಂದಿನ ಐದು ದಿನಗಳ ಒಳಗಾಗಿ ಮಾಡಬೇಕೆಂದು ಸೂಚನೆ ನೀಡಿದ ಅವರು, ಜಿಲ್ಲೆಯ ಜನತೆಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

    ಶಾಸಕ ಸುನೀಲ್ ಕುಮಾರ್ ಮಾತನಾಡಿ, ಪ್ರಾಧಿಕಾರ ಹೊಸ ಅಧಿಸೂಚನೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ಪಟ್ಟಿಮಾಡಿ ಕೊಡಿ. ಅದನ್ನು ಮತ್ತೊಮ್ಮೆ ಎಲ್ಲರೂ ಸೇರಿ ಅದನ್ನು ಮತ್ತೊಮ್ಮೆ ಚರ್ಚಿಸಿ ಬೆಂಗಳೂರಿನಲ್ಲಿ ಕಾರ್ಯದರ್ಶಿಗಳ ಮಟ್ಟದಲ್ಲಿ ಸಭೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡೋಣಾ ಎಂದರು.

    Click here

    Click here

    Click here

    Click Here

    Call us

    Call us

    ಜನಪ್ರತಿನಿಧಿಗಳು ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಸಭೆಗಳನ್ನು ಕರೆದಾಗ ಸಭೆಯ ನಡುವಳಿಯನ್ನು ದಾಖಲಿಸಿದ್ದಲ್ಲಿ ಮುಂದಿನ ಸಭೆಗಳಲ್ಲಿ ನಡುವಳಿ ಆಧಾರದ ಮೇಲೆ ಸಭೆಯನ್ನು ಮುಂದುವರೆಸಲು ಅನುಕೂಲವಾಗುತ್ತದೆ. ಆದರೆ ಕಳೆದ ಸಭೆಯ ನಡುವಳಿಯನ್ನು ದಾಖಲಿಸದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

    ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಗ್ರಾಮಠಾಣೆಗಳು ಇಲ್ಲದೇ ಇರುವುದರಿಂದ ಸಮಸ್ಯೆಗಳು ಉದ್ಭವವಾಗುತ್ತಿವೆ ಎಂದ ಅವರು, ಲೋಕೋಪಯೋಗಿ ಇಲಾಖೆ ರಸ್ತೆಯ ಅಂಚಿನಿಂದ ಗೃಹ ನಿರ್ಮಾಣಕ್ಕೆ 6 ಮೀ. ಬಿಟ್ಟು ಏಕವಿನ್ಯಾಸ ನಕ್ಷೆಗೆ ಅನುಮೋದನೆ ನೀಡಬೇಕು. ಇದರಿಂದ ಜನರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದರು.

    ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನಗರ ಯೋಜನಾ ಪ್ರಾಧಿಕಾರದಲ್ಲಿ ನಮ್ಮ ಕೆಲಸಗಳು ಆಗುವುದಿಲ್ಲ ಎಂದು ಜನರ ಮನಸ್ಸಿನಲ್ಲಿ ಇದೆ. ಸಲ್ಲಿಕೆಯಾಗುವ ಅರ್ಜಿಗಳಲ್ಲಿ ಕಂಡು ಬರುವ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಎ ಸುವರ್ಣ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ನಗರಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರ ಮತ್ತು ಗ್ರಾಮಾಂತರ ಇಲಾಖೆಯ ಸಹಾಯಕ ನಿರ್ದೇಶಕಿ ರಮ್ಯಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    4 × one =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.