Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ಮಹಿಳೆಯ ಸಬಲೀಕರಣಕ್ಕೆ ಪುಷ್ಠಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ಮಹಿಳೆಯ ಸಬಲೀಕರಣಕ್ಕೆ ಪುಷ್ಠಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರಾಜ್ಯ ಸರಕಾರ ಜಾರಿಗೆ ತಂದಿರುವ ಹೆಣ್ಣು ಮಕ್ಕಳ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಪುಷ್ಠಿ ನೀಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

    Click Here

    Call us

    Click Here

    ಅವರು ಅಂದು ಉಡುಪಿ ನಗರದ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ವತಿಯಿಂದ, ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಿರುವ ಹಿನ್ನೆಲೆ, ಆಯೋಜಿಸಲಾದ ಶಕ್ತಿ ಯೋಜನೆಯ ಸಂಭ್ರಮ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

    ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಯಶಸ್ವಿಯಾಗಿ ಜಾರಿಗೊಳಿಸಿದೆ. 2023 ರ ಜೂನ್ 11 ರಂದು ಶಕ್ತಿ ಯೋಜನೆಗೆ ಮೊದಲು ಜಾರಿಗೆ ತರಲಾಗಿದ್ದು, ಅಂದಿನಿಂದ ರಾಜ್ಯದ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಿದೆ. ಈ ಯೋಜನೆ ಜಾರಿಯಾದಾಗಿನಿಂದ  ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ಇದರ ಲಾಭ ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸರ್ಕಾರ 12,000 ಕೋಟಿ ರೂ. ಗೂ ಹೆಚ್ಚು ಹಣ ರಾಜ್ಯ ಸಾರಿಗೆ ನಿಗಮಕ್ಕೆ ಭರಿಸಿದೆ ಎಂದರು.

    ಶಕ್ತಿ ಯೋಜನೆಯ ಅನುಷ್ಠಾನದಿಂದಾಗಿ ಹೆಣ್ಣು ಮಕ್ಕಳು ಪ್ರಯಾಣಕ್ಕೆ ಮನೆಯ ಯಜಮಾನರ ಅವಲಂಭಿಸುವುದು ತಪ್ಪಿದಂತೆ ಆಗಿದೆ. ಹೆಣ್ಣು ಮಕ್ಕಳು ಸ್ವಂತ-ಉದ್ಯೋಗ ಹೊಂದಲು, ಶಿಕ್ಷಣವಂತರಾಗಲು ಹಾಗೂ ಮತ್ತಿತರ ದೈನಂದಿನ ಚಟುವಟಿಕೆಗಾಗಿ ಪ್ರಯಾಣಿಸಲು ಶಕ್ತಿ ಯೋಜನೆ ಸಹಕಾರಿಯಾಗಿದೆ ಎಂದ ಅವರು, ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಉನ್ನತ ಹುದ್ದೆಗಳನ್ನು ಹೊಂದುವುದರೊಂದಿಗೆ ಸ್ವಾವಲಂಭಿಗಳಾಗಬೇಕೆಂದು ಕರೆ ನೀಡಿದರು. 

    ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು ಮಾತನಾಡಿ, ನಮ್ಮ ಸರ್ಕಾರ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಯಶಸ್ವಿಯಾಗಿ ಕಳೆದ ಎರಡು ವರ್ಷಗಳಿಂದ ಅನುಷ್ಠಾನಗೊಳಿಸುತ್ತಿದೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ಪರಿಶೀಲಿಸಿ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರು. ಈ ಯೋಜನೆಗಳು ನಿರಂತರವಾಗಿರುತ್ತವೆ ಎಂದರು.

    Click here

    Click here

    Click here

    Click Here

    Call us

    Call us

    ಈ ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯನ್ನು ಮೊದಲಿಗೆ ಜಾರಿಗೆ ತರುವುದರೊಂದಿಗೆ ರಾಜ್ಯ ಸಾರಿಗೆ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳು ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿದೆ.  ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 2023 ರ ಜೂನ್‌ನಿಂದ ಈವರೆಗೆ 2.57 ಕೋಟಿ ಗೂ ಹೆಚ್ಚು ಮಹಿಳೆಯರು ಸಂಚರಿಸಿದ್ದು, 90.10 ಕೋಟಿ ರೂ. ಭರಿಸಲಾಗಿದೆ. ಆದರೆ ರಾಜ್ಯದಲ್ಲಿ 500 ಕೋಟಿ ಗೂ ಹೆಚ್ಚು ಬಾರಿ ಮಹಿಳೆಯರು ಸಂಚರಿಸುವ ಇದರ ಪ್ರಯೋಜನ ಪಡೆದಿದ್ದಾರೆ ಎಂದರು.

    ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪ್ರಥಮವಾಗಿ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿನಿಯರು,  ಅಲ್ಪಸಂಖ್ಯಾತರು ಸೇರಿದಂತೆ 500 ಕೋಟಿ ಮಹಿಳಾ ಪ್ರಯಾಣಿಕರು ಉದ್ಯೋಗ, ಶಿಕ್ಷಣ, ಧಾರ್ಮಿಕ ಕ್ಷೇತ್ರ, ಪ್ರವಾಸಿ ಸ್ಥಳಗಳಿಗೆ ಉಚಿತವಾಗಿ ಸಂಚರಿಸುವ ಮೂಲಕ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಎಂದರು.

    ಕೇವಲ ಮನೆಯೊಳಗೆ ಸೀಮೀತವಾಗಿದ್ದ ಹೆಣ್ಣುಮಕ್ಕಳು ಇಂದು ಹೊರ ಪ್ರಪಂಚವನ್ನು ನೋಡಲು ಶಕ್ತಿ ಯೋಜನೆಯಿಂದ ಅನುಕೂಲವಾಗಿದೆ. ಮಹಿಳೆಯರು ಸದೃಢವಾಗಿ ಸ್ವಾವಲಂಭಿಗಳಾಗಿ ಜೀವಿಸಲು ಈ ಯೋಜನೆ ದಾರಿಮಾಡಿಕೊಟ್ಟದೆ ಎಂದ ಅವರು, ಹೆಣ್ಣು ಮಕ್ಕಳಿಗೆ ಆರ್ಥಿಕ ಸ್ವಾತಂತ್ರ್ಯ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಯುವನಿಧಿ ಯಂತಹ ಕಾರ್ಯಕ್ರಮಗಳಿಂದ ದೊರಕಿದೆ ಎಂದರು.  

    ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ವೀಣಾ ವಾಗ್ಳೆ, ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ರೆಡ್‌ಕ್ರಾಸ್ ಕಾರ್ಯದರ್ಶಿ ಗಣನಾಥ ಎಕ್ಕಾರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ನಿಗಮದ ಬಸ್ಸಿಗೆ ಪೂಜೆ ಸಲ್ಲಿಸಿ, ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ, ಸಿಹಿತಿಂಡಿ ವಿತರಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    fourteen − 6 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.