ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ಕ್ರಷ್ಟ ದರ್ಜೆ ಪಡೆದ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಇಂದು ನಡೆಯುತ್ತಿರುವ ಹಲವು ರೀತಿಯ ಪ್ರಚಾರ ಮತ್ತು ಸ್ಪರ್ಧಾತ್ಮಕ ವಿಧಾನಗಳನ್ನೆಲ್ಲ ಅರಿತುಕೊಂಡು, ಮುಂದಿನ ವ್ಯಾಸಂಗಕ್ಕೆ ತೊಡಗಿಸಿಕೊಂಡು ಯಶಸ್ಸು ಪಡೆಯಬೇಕು ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯಾದ ಸೀತಾರಾಮ ನಕ್ಕತ್ತಾಯ ಹೇಳಿದರು.
ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾಪೂರ್ವಕವಾಗಿ ಆಯೋಜಿಸಿದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕುಂದಾಪುರ ಎಜುಕೇಶನ್ ಸೊಸೈಟಿಯ ಜೊತೆ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ಭಾಂಡ್ಯ ಮತ್ತು ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ವನಿತಾ ಜೆ.ಶೆಟ್ಟಿ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸಂದೀಪ್ ಪೂಜಾರಿ, ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಈಶ್ವರ್, ರಸಾಯನ ಶಾಸ್ತ್ರ ಉಪನ್ಯಾಸಕಿ ಅಕ್ಷತಾ ಶೆಟ್ಟಿ, ಭೌತಶಾಸ್ತ್ರ ಉಪನ್ಯಾಸಕರಾದ ರವಿ ಕುಮಾರ್ ಶೆಟ್ಟಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ದೀಪಾ ಶೆಟ್ಟಿ ಅವರು ಅಬಿನಂದನಾ ಪಟ್ಟಿಗಳನ್ನು ವಾಚಿಸಿದರು.
ಕಾರ್ಯಕ್ರಮವನ್ನು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆಯಾದ ಜ್ಯೋತಿ ನಿರೂಪಿಸಿ, ಇಂಗ್ಲೀಷ್ ಉಪನ್ಯಾಸಕಿ ರೂಪಾ ಜಿ. ಪಾಲೆಂಕರ್ ಅವರು ಧನ್ಯವಾದ ಸಲ್ಲಿಸಿದರು.















