Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೋಮವಾರ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು.

    Click Here

    Call us

    Click Here

    ಕಾರ್ಯಗಾರದ ಉದ್ಘಾಟನೆಯನ್ನು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ ಪರವಾಗಿ ಕಾರ್ಕಳದ ಉದ್ಯಮಿ ಸೂರಜ್ ಶೆಟ್ಟಿ ನೆರವೇರಿಸಿ ಮಾತನಾಡಿ,” ಮನೆ ಬಜೆಟ್ ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲದರ ಹಿಂದೆ ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಶ್ಲೇಷಣಾ ಕೌಶಲ್ಯ, ಆರ್ಥಿಕ ತರ್ಕ ಮತ್ತು ನಿರ್ಣಾಯಕತೆ ಅಗತ್ಯ ” ಎಂದು ಹೇಳಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮಾರುತಿ ಅವರು ಮಾತನಾಡಿ, ” ಅರ್ಥಶಾಸ್ತ್ರ ಮತ್ತು ಆರ್ಥಿಕತೆ ಎಂದರೆ ಕೇವಲ ಹಣದ ಚಲಾವಣೆ ಅಲ್ಲ, ಅದು ನಮ್ಮ ಆಯ್ಕೆಗಳು, ಆದ್ಯತೆಗಳು ಮತ್ತು ಜೀವನ ಪಾಠಗಳ ಚಿಹ್ನೆಯಾಗಿದೆ ” ಎಂದು ಹೇಳುತ್ತಾ ಜಾಗತಿಕ ಆರ್ಥಿಕತೆಯ ಪ್ರವಾಹದಲ್ಲಿ ಹೇಗೆ ಸಮತೋಲನ ವಹಿಸಬೇಕು ಎಂದು ತಿಳಿಸಿದರು.

    ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರೂ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ಅರ್ಥಶಾಸ್ತ್ರದ ಮಹತ್ವ, ಅದರ ಪ್ರಾಯೋಗಿಕ ಬಳಕೆ ಹಾಗೂ ಅರ್ಥಶಾಸ್ತ್ರವನ್ನು ವೃತ್ತಿಯಾಗಿ ಹೇಗೆ ಆಚರಿಸಬಹುದು ಎಂಬುದರ ಕುರಿತು ಮಾತುಗಳನ್ನಾಡಿದರು.

    ಕಾರ್ಯಗಾರದಲ್ಲಿ 2025ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ  ಅರ್ಥಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಅಲ್ಲದೆ 2025 ನೇ ಸಾಲಿನಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಶೇ. 100 ಫಲಿತಾಂಶ ಸಾಧಿಸಿದ ಕಾಲೇಜುಗಳ ಉಪನ್ಯಾಸಕರನ್ನು ಪುರಸ್ಕರಿಸಿ ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    2025ರಲ್ಲಿ ಅರ್ಥಶಾಸ್ತ್ರ ವಿಷಯದಿಂದ ಪ್ರಾಂಶುಪಾಲರಾಗಿ ಮುಂಬಡ್ತಿ ಹೊಂದಿದ ಶ್ರೀ ವಿನ್ಸೆಂಟ್ ವಿನೋದ್ ಡಿಸೋಜಾ, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು, ಬೆಳ್ಮಣ್ಣು ಅವರನ್ನು ಅಭಿನಂದಿಸಲಾಯಿತು.

    2025ನೇ ಸಾಲಿನಲ್ಲಿ ವಯೋನಿವೃತ್ತಿ ಹೊಂದುತ್ತಿರುವ ಹೊಸಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲ್ ಭಟ್ ಮತ್ತು ಗೋಳಿಯಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ವೈದ್ಯ ಅವರನ್ನು ಸನ್ಮಾನಿಸಲಾಯಿತು.

    ಕಾರ್ಯಗಾರದಲ್ಲಿ ಪೂರ್ವಾಹ್ನ ” ಎರಡನೇ ವರ್ಷದ ಅರ್ಥಶಾಸ್ತ್ರದಲ್ಲಿ ಗಣಿತದ ಸಮಸ್ಯೆಗಳಿಗೆ ಪರಿಹಾರ ” ಎಂಬ ವಿಚಾರದ ಕುರಿತು ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದ ಅರ್ಥಶಾಸ್ತ್ರ ಉಪನ್ಯಾಸಕರಾದ ದಿನಕರ ಶೆಟ್ಟಿ ಅವರು ವಿಚಾರ ಮಂಡಿಸಿದರು.

    ಅಪರಾಹ್ನ ” ಹೊಸ ಪ್ರಶ್ನೆ ಬ್ಯಾಂಕ್ ಮತ್ತು ಪ್ರಶ್ನೆ ಪತ್ರಿಕೆ ತಯಾರಿಕೆಗೆ ಸಂಬಂಧಿಸಿದ ಮಾಹಿತಿಗಳು ” ಎಂಬ ವಿಚಾರದ ಕುರಿತು ಸರ್ಕಾರಿ ಸ್ವತಂತ್ರ ಪಿ.ಯು. ಕಾಲೇಜು, ಹಾಸನದ ಅರ್ಥಶಾಸ್ತ್ರ ಉಪನ್ಯಾಸಕರಾದ ಧರ್ಮೇಂದ್ರ ಬಿ.ಜಿ ಅವರು ವಿಚಾರ ಮಂಡಿಸಿದರು. ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು.

    ಕಾರ್ಯಗಾರದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಮಂಡಳಿ, ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ಅರ್ಥಶಾಸ್ತ್ರ ಉಪನ್ಯಾಸಕರು, ಕ್ರಿಯೇಟಿವ್ ಕಾಲೇಜಿನ ಬೋಧಕ- ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ  ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷೆ ಅನುರಾಧ. ಎಚ್. ಸ್ವಾಗತಿಸಿ,  ಉಪನ್ಯಾಸಕಿ ಜ್ಯೋತಿ ಕೊಲ್ಲೂರು ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    2 × four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.