ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ಮತ್ತು ಬಸ್ರೂರು ಇಂಟರಾಕ್ಟ್ ಕ್ಲಬ್ ನಿವೇದಿತಾ ಪ್ರೌಢಶಾಲೆ ಇದರ ಸಹಯೋಗದೊಂದಿಗೆ ಬುಧವಾರದಂದು ಬಸ್ರೂರಿನ ನಿವೇದಿತಾ ಪ್ರೌಢಶಾಲೆ ದಿ. ವೀರ ರಾಜೇಂದ್ರ ಹೆಗ್ಡೆ ಸಭಾಭವನದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ನಿವೃತ್ತ ಮುಖ್ಯೋಪಾಧ್ಯಾಯರಾದ ಹೇರಿಕುದ್ರು ಕೊರಗಯ್ಯ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಸುಬ್ಬ ಕೆ. ವಹಿಸಿದ್ದರು.

ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.
ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರಾದ ಲ.ರತ್ನಾಕರ ಶೆಟ್ಟಿ ಕಂದಾವರ, ಪ್ರಧಾನ ಕಾರ್ಯದರ್ಶಿ ಲ. ಭುಜಂಗ ಶೆಟ್ಟಿ ರಟ್ಟಾಡಿ, ನಿರ್ದೇಶಕರಾದ ಸುಕುಮಾರಶೆಟ್ಟಿ ಹೇರಿಕುದ್ರು, ಲ. ಪ್ರಭಾಕರ ಶೆಟ್ಟಿ ಕೋಟೇಶ್ವರ, ಲ. ಪ್ರಶಾಂತ್ ಶೆಟ್ಟಿ ಶಿರೂರು, ಲ. ಪ್ರತೀಶ್ ಶೆಟ್ಟಿ ಕೊಕ್ಕರ್ಣೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿ ಶಾಲೆಯ ಇಂಟರ್ ಆಕ್ಟ್ ಕ್ಲಬ್ ನ ನಿರ್ದೇಶಕರಾದ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಶಾಲಾ ಶಿಕ್ಷಕಿ ಸರೋಜಾ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ರಾಜಾರಾಮ್ ಶೆಟ್ಟಿ ಧನ್ಯವಾದ ಗೈದರು.
















