ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಸಿ.ಎ. ಸಿ.ಎಸ್. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಕಾಲೇಜಿನ ಟ್ರಸ್ಟಿಗಳಾದ ಅನುಪಮಾ ಎಸ್. ಶೆಟ್ಟಿ, ಉದ್ಘಾಟಿಸಿ ಮಾತನಾಡಿ, ಸಿ.ಎ. ಮತ್ತು ಸಿ.ಎಸ್. ನಂತರ ವೃತ್ತಿಪರ ಕೋರ್ಸ್‌ಗಳನ್ನು ಪದವಿಯ ಜೊತೆಗೆ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಯಲ್ಲಿ ಉತ್ತಮ ಉದ್ಯೋಗ ಪಡೆಯಲು ಸಾಧ್ಯ ಮತ್ತು ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಕಾಲೇಜಿನಲ್ಲಿ ನೀಡಲಾಗುತ್ತಿರುವ ತರಬೇತಿಯನ್ನು ಪಡೆಯುವುದರ ಮುಖಾಂತರ ಹೆಚ್ಚು ಜ್ಞಾನಾರ್ಜನೆಯನ್ನು ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರದ ಕೆರಿಯ್ ಕೋಚಿಂಗ್ ಸಂಸ್ಥೆಯ ಸ್ಥಾಪಕ ಸಿ.ಎ. ರಾಜೇಶ ಶೆಟ್ಟಿ ಮತ್ತು ಸಿ.ಎ. ನಾಗೇಶ ಆರ್ ನಾಯ್ಕ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಿ.ಎ. ಎಸ್. ಕೋರ್ಸ್‌ನ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರವಿಚಂದ್ರ ಪ್ರಾಸ್ತಾವಿಕ ಮಾತನಾಡಿದರು. ಐಕ್ಯೂಎಸಿ ಘಟಕದ ಸಂಯೋಜಕರಾದ ಸಂದೀಪ ಕೆ., ಸ್ವಾಗತಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀನಿಧಿ ತೃತೀಯ ಬಿ.ಕಾಂ. ವಂದಿಸಿದರು.










