Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಯುವಜನರಲ್ಲಿ ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯ ಐದನೇ ವಾರ್ಷಿಕೋತ್ಸವದ ಅಂಗವಾಗಿ ಮಾದಕ ವಸ್ತು ಸೇವನೆ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು.

    ಮಾದಕ ವ್ಯಸನವು ಬಹುದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಕೆಲವರು ಅತೀ ಚಿಕ್ಕ ವಯಸ್ಸಿಗೆ ಮಾದಕ ವಸ್ತುಗಳ ದಾಸರಾಗಿ ತಮ್ಮ ಅಮೂಲ್ಯ ಜೀವವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ವ್ಯಕ್ತಿಯು ಯಾವುದೇ ವ್ಯಸನಕ್ಕೆ ಒಳಗಾದಲ್ಲಿ ತನ್ನ ಕುಟುಂಬ, ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೇ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸುತ್ತದೆ. ಭವಿಷ್ಯದ ಹಿತದೃಷ್ಠಿಯಿಂದ ವಿದ್ಯಾರ್ಥಿ ಜೀವನದಿಂದಲೇ ವ್ಯಸನಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಇನ್ನೂ ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕು ಎಂದರು.

    ಯುವಶಕ್ತಿ ದೇಶದ ಆಸ್ತಿ. ಯುವಪೀಳಿಗೆ ಸಾಮಾಜಿಕ ಮತ್ತು ವೈಯಕ್ತಿಕ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸಿಕೊಂಡು ವ್ಯಸನಮುಕ್ತ ಸಮಾಜಕ್ಕೆ ಕೊಡುಗೆ ನೀಡಬೇಕು. ಮಾದಕ ದ್ರವ್ಯ ಸೇವನೆಯ ಚಟಕ್ಕೆ ಒಳಗಾಗುವುದಿಲ್ಲ ಎಂಬ ಧೃಢವಾದ ನಿಲುವು ಹೊಂದಬೇಕು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಮಾದಕ ವಸ್ತುಗಳ ಬಳಕೆ, ಮಾರಾಟವಾಗುತ್ತಿರುವ ಬಗ್ಗೆ ಮಾಹಿತಿ ದೊರೆತಲ್ಲಿ ಶಾಲಾ ಮುಖ್ಯಸ್ಥರ ಗಮನಕ್ಕೆ ತರಬೇಕು ಎಂದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ಡಯಟ್ ಪ್ರಾಂಶುಪಾಲ ಡಾ.ಅಶೋಕ್ ಕಾಮತ್, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಬೋಧಕ ಹಾಗೂ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಸ್ವಾಗತಿಸಿ, ಕನ್ನಡ ಭಾಷಾ ಶಿಕ್ಷಕಿ ತಾರಾಮತಿ ನಿರೂಪಿಸಿದರೆ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    nine + 5 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.