Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಹಿತ್ಯವೆಂಬುದು ಮನಸ್ಸಿನ ಆಳದಿಂದ ಹೊರಹೊಮ್ಮುವ ಭಾವಧಾರೆ: ಡಾ. ನಾಗತಿಹಳ್ಳಿ
    ಊರ್ಮನೆ ಸಮಾಚಾರ

    ಸಾಹಿತ್ಯವೆಂಬುದು ಮನಸ್ಸಿನ ಆಳದಿಂದ ಹೊರಹೊಮ್ಮುವ ಭಾವಧಾರೆ: ಡಾ. ನಾಗತಿಹಳ್ಳಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರದಂದು ” ಕ್ರಿಯೇಟಿವ್ ಪುಸ್ತಕ ಧಾರೆ – 2025 ” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ…ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಅವರು ಉದ್ಘಾಟಿಸಿ ಮಾತನಾಡಿ, “ಪುಸ್ತಕವೆಂದರೆ ಕೇವಲ ಅಕ್ಷರಗಳ ಸಂಗ್ರಹವಲ್ಲ. ಅದು ಕಾಲ, ಸಮಾಜ ಮತ್ತು ಮಾನವನ ಭಾವನೆಗಳ ಪ್ರತಿಬಿಂಬ. ಇಂತಹ ಕಾರ್ಯಕ್ರಮಗಳು ಓದುವ ಅಭ್ಯಾಸವನ್ನು ಪುನರುಜ್ಜೀವನಗೊಳಿಸುತ್ತವೆ ” ಎಂದರು.

    ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ಸಾಹಿತಿಗಳು ಹಾಗೂ ಚಿತ್ರ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿ, “ಪುಸ್ತಕವೆಂದರೆ ಕೇವಲ ಹಾಳೆಗಳ ಗುಚ್ಛವಲ್ಲ. ಅದು ಕಾಲದ ಸ್ಮರಣೆ, ಸಮಾಜದ ಕನ್ನಡಿ ಮತ್ತು ಮನಸ್ಸಿನ ಆಳದಿಂದ ಹೊರ ಹೊಮ್ಮುವ ಭಾವಧಾರೆ ಮತ್ತು ಮಾನವನ ಮನಸ್ಸಿನ ನಕ್ಷೆಯೇ ಆಗಿದೆ ” ಎಂದರು.

    ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ಅವರು ಸ್ವಾಗತಗೈಯುತ್ತಾ ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ “ಲೇಖಕರು ತಮ್ಮ ವಿಚಾರಧಾರೆಯ ನದಿಗಳನ್ನು ಕೃತಿಗಳಲ್ಲಿ ಹರಿಸಿದ್ದಾರೆ. ಓದುಗರು ಅದರ ತೀರದಲ್ಲಿ ನಿಂತು ಚಿಂತನೆಗಳ ನೀರನ್ನು ಕುಡಿಯುವಂತಿದೆ. ಇಂತಹ ಸಾಹಿತ್ಯವು ಕಾಲವನ್ನು ಮೀರಿ ನೆನಪಿನ ಮಡಿಲಿನಲ್ಲಿ ಉಳಿಯುತ್ತವೆ ” ಎಂದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳದ ಕ.ಸಾ.ಪ ಸಾಹಿತಿಗಳು ಮತ್ತು ಅಧ್ಯಕ್ಷರಾಗಿರುವ  ಕೊಂಡಳ್ಳಿ ಪ್ರಭಾಕರ ಶೆಟ್ಟಿ ಮಾತನಾಡಿ ” ಇಂದಿನ ಯಾಂತ್ರಿಕ ಜೀವನದಲ್ಲಿ ಓದಿನ ಮಹತ್ವವನ್ನು ಮರೆಯುತ್ತಿರುವಾಗ, ಇಂತಹ ಪುಸ್ತಕ ಬಿಡುಗಡೆಗಳು ಸಾಹಿತ್ಯ ಪ್ರೇಮಿಗಳಿಗೆ ಹೊಸ ಚೈತನ್ಯ ತುಂಬುತ್ತವೆ ” ಎಂದರು.

    Click here

    Click here

    Click here

    Call us

    Call us

    ಇನ್ನೋರ್ವ ಮುಖ್ಯ ಅತಿಥಿ ಡಾ. ಪ್ರದೀಪ ಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು, ಮಂಡ್ಯ ಅವರು ಮಾತನಾಡಿ, “ಪುಸ್ತಕದ ಜೀವನ ಅದರ ಓದುಗರ ಕೈಯಲ್ಲಿ ಪ್ರಾರಂಭವಾಗುತ್ತದೆ. ಉಳಿಸಿ ಬೆಳೆಸಬೇಕಾದದ್ದು ಸಹೃದಯರ ಕರ್ತವ್ಯ” ಎಂದು ಹೇಳಿದರು. ಕಥೆಗಳ ಮೂಲಕ ಸಭಾಸದರ ಗಮನ ಸೆಳೆದರು.

    ಸಭಾಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ “ಸಾಹಿತ್ಯವು ಜನರ ಬದುಕಿಗೆ ಕನ್ನಡಿಯಂತೆ. ಓದುಗರು ಪುಸ್ತಕದಿಂದ ಕಥೆಗಳನ್ನು ಮಾತ್ರವಲ್ಲ, ಬದುಕಿನ ಮೌಲ್ಯಗಳನ್ನು, ಸಂಬಂಧಗಳ ಅರ್ಥವನ್ನು, ಮನುಷ್ಯತ್ವದ ಸಾರವನ್ನು ಪಡೆದುಕೊಳ್ಳುತ್ತಾರೆ ” ಎಂದರು.

    ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಡಾ. ನಾಗತಿಹಳ್ಳಿ, ಡಾ. ಕೆ.ಚಿನ್ನಪ್ಪ ಗೌಡ ಹಾಗೂ 22 ಕೃತಿಗಳ ಕರ್ತೃಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

    ಅನಾವರಣಗೊಂಡಿರುವ ಕೃತಿಗಳು:

    •        ಯಾತ್ರೆ – ಚಂದ್ರಕಾಂತ ಪೋಕಳೆ

    •        ವಿಜ್ಞಾನ ಕೌತುಕಗಳ ಮಹಾಯಾನ – ಎಲ್. ಪಿ ಕುಲಕರ್ಣಿ

    •        ಹರ್ಷ ರಾಗ – ಪೌಝಿಯಾ ಸಲೀಂ

    •        ಹಿತಶತ್ರು – ಪದ್ಮಲತಾ ಮೋಹನ್ 

    •        ಪುಟ್ಟ ದೇವರ ಕಣ್ಣೀರು – ಸದಾಶಿವ ಸೊರಟೂರು

    •        ಬದುಕು ಮಾಯೆಯ ಮಾಟ – ಕುಮಾರಸ್ವಾಮಿ ತೆಕ್ಕುಂಜ

    •        ಕಾವ್ಯ ಧ್ಯಾನ – ನಾಗೇಶ್ ಜೆ. ನಾಯಕ

    •        ನಿನಗೆ ನೀನೇ ಬೆಳಕು – ಪ್ರಜ್ವಲಾ ಶೆಣೈ 

    •        ನಿನ್ನ ಇಚ್ಛೆಯಂತೆ ನಡೆವೆ – ಮನು ಗುರುಸ್ವಾಮಿ

    •        ಕಣ್ಣ ಬಾಗಿಲಿಗೆ ಬಂದ ನೀರು – ಸಂತೆಬೆನ್ನೂರು ಫೈಜ್ನಟರಾಜ್ 

    •        ಸ್ವಾತಿ ಬೊಂಬಾಟ್ – ಎಂ.ಮನೋಹರ ಪೈ

    •        ಗ್ಯಾಂಗ್ ಸ್ಟರ್ ಮತ್ತು ಅವಳು – ಮಂಜುನಾಥ್ ಕುಂಬಾರ್

    •        ಇದೊಳ್ಳೆ ವರಸೆ – ಸಂದೇಶ್ ಎಚ್. ನಾಯ್ಕ್

    •        ಮಾಂಡವ್ಯ ದೀಪ – ಡಾ. ಪ್ರದೀಪ ಕುಮಾರ ಹೆಬ್ರಿ

    •        ಬೆಳ್ದೀಪ – ಡಾ. ಪ್ರದೀಪ ಕುಮಾರ ಹೆಬ್ರಿ

    •        ನಿಲುಕದ ನಕ್ಷತ್ರ – ಡಾ. ಸುಮತಿ ಪಿ.

    •        ಸಿಹಿಜೀವಿ ಕಂಡ ಅಂಡಮಾನ್ – ಸಿಹಿಜೀವಿ ಸಿ.ಜಿ ವೆಂಕಟೇಶ್ವರ

    •        ಅನುಭವ ದೀಪ್ತಿ – ಶುಭಲಕ್ಷ್ಮಿ ಆರ್. ನಾಯಕ್

    •        ಈ ಪಯಣದಲ್ಲಿ – ಶ್ಯಾಮಲಾ ಗೋಪಿನಾಥ್

    •        ಸಂಗೀತ ಶರಧಿ – ರಾಜೇಂದ್ರ ಭಟ್. ಕೆ.

    •        ಅಸಂಗತ – ಅಕ್ಷತಾ ರಾಜ್ ಪೆರ್ಲ

    •        ವಿಜ್ಞಾನ ವಿಶಾರದರು – ಎಲ್‌.ಪಿ ಕುಲಕರ್ಣಿ

    ಸಂವಾದ ಕಾರ್ಯಕ್ರಮ:
    ಅಪರಾಹ್ನ 2. 30 ರಿಂದ ನಾಗತಿಹಳ್ಳಿ ಚಂದ್ರಶೇಖರ ಅವರ ಚಲನಚಿತ್ರಗಳಲ್ಲಿ ಬಳಸಿರುವ ಭಾವಗೀತೆಗಳ ಗಾಯನದ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಿತು. ಖ್ಯಾತ ನಿರೂಪಕರಾದ ಅವಿನಾಶ್ ಕಾಮತ್ ರವರು ಸಂವಾದ ಕಾರ್ಯಕ್ರಮ ನಿರ್ವಹಿಸಿಕೊಟ್ಟರು. ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಯಶವಂತ್ ಎಂ.ಜಿ ಅವರಿಂದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.

    ಸಹ ಸಂಸ್ಥಾಪಕರಾದ ಅಮೃತ್ ರೈ, ಗಣನಾಥ ಶೆಟ್ಟಿ ಬಿ, ಗಣಪತಿ ಭಟ್ ಕೆ.ಎಸ್, ವಿಮಲ್ ರಾಜ್.ಜಿ, ಆದರ್ಶ ಎಂ.ಕೆ, ಉಪನ್ಯಾಸಕ – ಉಪನ್ಯಾಸಕೇತರ ವರ್ಗದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.

    ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್.ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.