Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿನ ಅವ್ಯವಹಾರ ಸಾಬೀತು. ಆಡಳಿತ ಮಂಡಳಿ ಮೇಲೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ಗೆ ಅನುಮತಿ
    ಉಡುಪಿ ಜಿಲ್ಲೆ

    ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿನ ಅವ್ಯವಹಾರ ಸಾಬೀತು. ಆಡಳಿತ ಮಂಡಳಿ ಮೇಲೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ಗೆ ಅನುಮತಿ

    Updated:18/08/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬ್ರಹ್ಮಾವರದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಒಟ್ಟು 13.92 ಕೋಟಿ ರೂ. ನಷ್ಟ ಉಂಟಾಗಿರುವುದು ತನಿಖೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಮೇಲೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅನುಮತಿ ನೀಡಿದ್ದಾರೆ.

    Click Here

    Call us

    Click Here

    ಕಾರ್ಖಾನೆಗೆ ಒಟ್ಟು 13.92 ಕೋಟಿ ರೂ. ಆರ್ಥಿಕ ನಷ್ಟ ಉಂಟಾಗಲು ಆಡಳಿತ ಮಂಡಳಿ, ಟೆಂಡರ್‌ ಕಮ್‌ ಹರಾಜಿನ ತಾಂತ್ರಿಕ ಸಮಿತಿ ಸದಸ್ಯರು ಹಾಗೂ ಆಗಿನ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್‌ ಬಿ. ನಾಯಕ್‌ ಮತ್ತು ಜಿ. ಎನ್‌. ಲಕ್ಷ್ಮೀನಾರಾಯಣ ಅವರ ನಿರ್ಲಕ್ಷ್ಯವೇ ಕಾರಣ ಎಂಬುದು ತನಿಖಾ ವರದಿಯಲ್ಲಿ ಕಂಡು ಬಂದಿದೆ.

    ಹೀಗಾಗಿ ಈ ಹಿಂದೆ ದಾಖಲಾಗಿರುವ ಕ್ರಿಮಿನಲ್‌ಮೊಕದ್ದಮೆಗೆ ಸಂಬಂಧಿಸಿದಂತೆ ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್‌ . ನಾಯ್ಕ ಹಾಗೂ ಜಿ. ಎನ್‌. ಲಕ್ಷ್ಮೀನಾರಾಯಣ ಅವರ ವಿರುದ್ಧ ಕ್ರಿಮಿನಲ್‌ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹಾಗೂ ಈ ಇಬ್ಬರು ಅಧಿಕಾರಿಗಳ ಮೇಲೆ ಇಲಾಖಾ ವಿಚಾರಣೆಗೆ ಸಹಕಾರ ಇಲಾಖೆಗೆ ಶಿಫಾರಸು ಮಾಡಿದ್ದಾರೆ ಅಲ್ಲದೆ ನಷ್ಟದ ಹಣವನ್ನು ಸಂಬಂಧಪಟ್ಟವರಿಂದ ವಸೂಲು ಮಾಡಲು ಸೂಚಿಸಿದ್ದಾರೆ. ಅವ್ಯವಹಾರದಲ್ಲಿ ಆಡಳಿತ ಮಂಡಳಿ ನಿರ್ದೇಶಕರು ಭಾಗಿಯಾಗಿದ್ದಾರೆ ಎಂಬುದು ತನಿಖಾ ವರದಿಯಲ್ಲಿ ಸ್ಪಷ್ಟವಾಗಿರುವುದರಿಂದ ಅವರ ಮೇಲೂ ಕ್ರಿಮಿನಲ್‌ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

    ಸರ್ಕಾರದ ಅನುಮತಿ ಪಡೆದು ಆಡಳಿತ ಮಂಡಳಿಯು ಕಾರ್ಖಾನೆ ಕಟ್ಟಡ ಮತ್ತು ಯಂತ್ರೋಪಕರಣಗಳನ್ನು ಚೆನ್ನೈನ ನ್ಯೂ ರಾಯಲ್‌ ಟ್ರೇಡರ್ಸ್‌ಗೆ ಮಾರಾಟ ಮಾಡಿತ್ತು. ಈ ಟೆಂಡರ್‌ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಉಡುಪಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು. ಅವ್ಯವಹಾರದ ಆರೋಪಗಳು ಕೇಳಿ ಬಂದಾಗ ತನಿಖೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ. ರಾಧಾಕೃಷ್ಣ ಹೊಳ್ಳ ಅವರನ್ನು ನೇಮಕ ಮಾಡಲಾಗಿದ್ದು, ಅವರು ಸಲ್ಲಿಸಿರುವ ವರದಿಯಲ್ಲಿ ಅವ್ಯವಹಾರ ಸಾಬೀತಾಗಿದೆ.

    ಘಟನೆಯ ಹಿನ್ನೆಲೆ:
    1985ರಲ್ಲಿ ಆರಂಭವಾಗಿದ್ದ ಸಕ್ಕರೆ ಕಾರ್ಖಾನೆ 2002-03ನೇ ಸಾಲಿನವರೆಗೆ ಕಬ್ಬು ನುರಿಸಿದ್ದು, ಕಬ್ಬಿನ ಕೊರತೆ ಮತ್ತು ದುಡಿಯುವ ಬಂಡವಾಳದ ಕೊರತೆ ಕಾರಣ 2003-04ನೇ ಸಾಲಿನಿಂದ ಕಬ್ಬು ನುರಿಸುವ ಕಾರ್ಯ ಸ್ಥಗಿತಗೊಳಿಸಲಾಗಿತ್ತು. 17 ವರ್ಷಗಳಿಂದ ಕಾರ್ಯನಿರ್ವಹಿಸದ ಕಾರಣ ತುಕ್ಕು ಹಿಡಿದು ಹಾಳಾಗುತ್ತಿರುವ ಯಂತ್ರೋಪಕರಣ ಮತ್ತು ಕಾರ್ಖಾನೆ ಕಟ್ಟಡವನ್ನು ಟೆಂಡರ್‌ ಕಮ್‌ ಹರಾಜು ಮೂಲಕ ಮಾರಾಟ ಮಾಡಲು ಆಡಳಿತ ಮಂಡಳಿ ಕೋರಿದ್ದರಿಂದ ಅನುಮತಿ ನೀಡಲಾಗಿತ್ತು.

    Click here

    Click here

    Click here

    Click Here

    Call us

    Call us

    ಟೆಂಡರ್‌ ಪ್ರಕ್ರಿಯೆಯನ್ನು ನಿಯಮಗಳ ಪ್ರಕಾರ ನಡೆಸದಿರುವುದು ದಾಖಲಾತಿಗಳಿಂದ ಸ್ಪಷ್ಟವಾಗಿದೆ. ಯಂತ್ರೋಪಕರಣ ಹಾಗೂ ನಿರುಪಯುಕ್ತ ಸಾಮಗ್ರಿಗಳನ್ನು ಟೆಂಡರ್‌ ಕಮ್‌ ಹರಾಜು ಮೂಲಕ ಮಾರಾಟ ಮಾಡುವ ಪ್ರಕ್ರಿಯೆಯಲ್ಲಿ ಪ್ರತಿ ಕೆಜಿಗೆ ಅತಿ ಹೆಚ್ಚು ದರ ನಮೂದಿಸಿದ ಬಿಡ್‌ದಾರರಿಗೆ ಮಾರಾಟ ಮಾಡಬೇಕು ಎಂದು ಆಡಳಿತ ಮಂಡಳಿ ನಿರ್ಧಾರ ಕೈಗೊಂಡು, 50 ಲಕ್ಷ ರೂ. ಭದ್ರತಾ ಠೇವಣಿ ಹಾಗೂ 5 ಕೋಟಿ ರೂ. ಬ್ಯಾಂಕ್‌ ಗ್ಯಾರಂಟಿ ಪಾವತಿಸಬೇಕು ಎಂದು ಬಿಡ್‌ದಾರರಿಗೆ ತಿಳಿಸಿತ್ತು.

    ಹಳೆಯ ಯಂತ್ರೋಪಕರಣಗಳನ್ನು ಕೆಜಿ ಲೆಕ್ಕದಲ್ಲಿ ತೆಗೆದುಕೊಂಡು ಹೋಗುವುದು ಕಷ್ಟ, ಹೀಗಾಗಿ ಲಾಟ್‌ ಆಧಾರದ ಮೇಲೆ ನೀಡಬೇಕು ಎಂದು ನ್ಯೂ ರಾಯಲ್‌ ಟ್ರೇಡರ್ಸ್‌ ನವರು ಮನವಿ ಮಾಡಿಕೊಂಡಿದ್ದು, ಈ ಮನವಿಗೆ ಆಡಳಿತ ಮಂಡಳಿ ಸಮ್ಮತಿಸಿರುವುದು ಟೆಂಡರ್‌ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಚಾರಣಾಧಿಕಾರಿಗಳು ವರದಿಯಲ್ಲಿ ತಿಳಿಸಿದ್ದಾರೆ.

    ರಾಯಲ್‌ ಟ್ರೇಡರ್ಸ್‌ನವರು 46 ಲೋಡುಗಳಲ್ಲಿ 1139.37 ಮೆಟ್ರಿಕ್‌ ಟನ್‌ ಸ್ಕ್ರಾಪ್‌ ತೆಗೆದುಕೊಂಡು ಹೋಗಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ 83 ಲೋಡುಗಳಲ್ಲಿ 2245.65 ಮೆಟ್ರಿಕ್‌ ಟನ್‌ ಸ್ಕ್ರಾಪ್‌ ಸಾಗಾಟ ಮಾಡಿರುವುದು ದಾಖಲೆಗಳಲ್ಲಿ ಸ್ಪಷ್ಟವಾಗಿದೆ. ಖರೀದಿದಾರರು ಕಾರ್ಖಾನೆಗೆ ನೀಡಿರುವ ಹಣವನ್ನು ಕಳೆದು ಇನ್ನೂ 12.63 ಕೋಟಿ ರೂ. ಬರಬೇಕಾಗಿದೆ. ಇದಲ್ಲದೆ ಹಳೆಯ ಕಟ್ಟಡ ಸಾಮಗ್ರಿಗಳನ್ನು ಕೂಡ ಮಾರಾಟ ಮಾಡಿದ್ದು, ಇದರಿಂದ 1.28 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಕಾರ್ಖಾನೆಯಿಂದ ಸಾಗಾಟ ಮಾಡಲಾಗಿದೆ ಎಂದು ತನಿಖಾ ವರದಿಯಲ್ಲಿ ವಿವರಿಸಲಾಗಿದೆ.

    ನಿರಂತರ ಹೋರಾಟ:
    ಹಳೆಯ ಯಂತ್ರೋಪಕರಣ ಮಾರಾಟದಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಭಾಪತಿ ಎಸ್.‌ ಪ್ರಕಾಶ್ಚಂದ್ರ ಶೆಟ್ಟಿ ಅವರ ನೇತೃತ್ವದ ಉಡುಪಿ ಜಿಲ್ಲಾ ರೈತ ಸಂಘ ನಿರಂತರವಾಗಿ ಹೋರಾಟ ಸಂಘಟಿಸಿ ಸರಕಾರದ ಗಮನ ಸೆಳೆದಿತ್ತು. ಇದರ ಫಲವಾಗಿ ಅವ್ಯವಹಾರ ನಡೆದಿರುವುದು ದೃಢಪಟ್ಟಿದ್ದು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ವಿರುದ್ಧ ಕ್ರಿಮಿನಲ್‌ ಕೇಸ್‌ ಹಾಗೂ ಆಡಳಿತ ಮಂಡಳಿ ಮೇಲೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ದೊರೆತಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    two × two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.