ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ಚಿತ್ರದುರ್ಗದ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಸಿಬ್ಬಂದಿ ಸಂದೀಪ್ ಪೂಜಾರಿ ಅವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.





