Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಸದೃಢ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಸದೃಢ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯನು ಆರೋಗ್ಯವಾಗಿರುತ್ತಾನೆ. ಪ್ರಸ್ತುತ ದಿನಮಾನಗಳಲ್ಲಿ ಯುವಜನರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹೊರಬರಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಪ್ರಕರಣದಲ್ಲಿ ನೀಡಿರುವ ನಿರ್ದೇಶನದನ್ವಯ “ಏಕರೂಪದ ಮಾನಸಿಕ ಆರೋಗ್ಯ ನೀತಿ”ಯನ್ನು ರೂಪಿಸುವ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

    ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಏಕರೂಪದ ಮಾನಸಿಕ ಆರೋಗ್ಯ ನೀತಿಯನ್ನು ಅನುಷ್ಠಾನಗೊಳಿಸುವುದರಿಂದ ವಿದ್ಯಾರ್ಥಿಗಳಲ್ಲಿರುವ ಮಾನಸಿಕ ಸಮಸ್ಯೆಗಳನ್ನು ಆರಂಭದಲ್ಲೇ ಗುರುತಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದ ಅವರು ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ದೆ ಮತ್ತು ತರಬೇತಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಖಾತ್ರಿಪಡಿಸುವ ನೀತಿಗಳು, ಮಾನಸಿಕ ಬೆಂಬಲ, ಸುರಕ್ಷಿತ ವಾತಾವರಣ ಮತ್ತು ತಾರತಮ್ಯ ರಹಿತ ಶಿಕ್ಷಣ ನೀಡುವ ಕುರಿತು ಸರ್ವೋಚ್ಚ ನ್ಯಾಯಾಲಯದ ಹಾಗೂ ಸರ್ಕಾರದ ನಿರ್ದೇಶನದನ್ವಯ “ಏಕರೂಪದ ಮಾನಸಿಕ ಆರೋಗ್ಯ ನೀತಿ” ಯನ್ನು ಅನುಷ್ಟಾನಗೊಳಿಸುವುದು ಅವಶ್ಯಕ ಎಂದರು.

    ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡಕ್ಕೆ ಒಳಗಾದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಸಮಾಲೋಚನೆ ಹಾಗೂ ಸಹಾಯ ಮಾಡಲು ಅನುಕೂಲವಾಗುವಂತೆ ಶಿಕ್ಷಣ ಸಂಸ್ಥೆಗಳಲ್ಲಿ ಆಪ್ತ ಸಮಾಲೋಚಕರನ್ನು ನೇಮಿಸಿ, ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದ ಅವರು, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಮಾನಸಿಕ ತಜ್ಜರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    two × four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.