Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ

    Updated:05/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವುದರೊಂದಿಗೆ ಸಮಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ  ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಅಗತ್ಯವಿರುವ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದೆ.  ಜಿಲ್ಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 1.05 ಲಕ್ಷ ಹಾಗೂ ಗ್ರಾಮೀಣ ಭಾಗದಲ್ಲಿ 2.14 ಲಕ್ಷ ಸೇರಿದಂತೆ ಒಟ್ಟು ಸುಮಾರು 3.19 ಲಕ್ಷ  ಕುಟುಂಬಗಳಿದ್ದು, ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕು. ಯಾವುದೇ ಕುಟುಂಬಗಳು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚ ವಹಿಸಿ ಸಮೀಕ್ಷೆ ನಡೆಸಬೇಕು ಎಂದರು.

    ಸಾಮಾನ್ಯವಾಗಿ ಎಲ್ಲ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ವಾಸದ ಮನೆಗಳ ಆರ್.ಆರ್. ಮೀಟರ್ ಆಧಾರದ ಮೆಲೆ ಮನೆಗಳನ್ನು ಗುರುತಿಸಿ, ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ. ಹೀಗಾಗಿ ಮೊದಲ ಹಂತದಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಮನೆಗಳ ವಿದ್ಯುತ್ ಮೀಟರ್ ರೀಡರ್‌ಗಳಿಂದ ಕುಟುಂಬಗಳ ಪಟ್ಟಿ ಮಾಡಿ, ಮನೆಗಳಿಗೆ ಜಿಯೋ ಟ್ಯಾಗಿಂಗ್‌ಗಾಗಿ ಸ್ಟಿಕ್ಕರ್‌ಗಳನ್ನು ಅಳವಡಿಸುವ ಕಾರ್ಯ ಆರಂಭಿಸಲಾಗಿದ್ದು, ಸೆಪ್ಟಂಬರ್ 10 ರ ಒಳಗಾಗಿ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವನ್ನು ಮೆಸ್ಕಾಂ ಇಲಾಖೆಯವರು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

    ಅನಧಿಕೃತ ಕಟ್ಟಡಗಳು, ಮತ್ತಿತರ ಪ್ರದೇಶಗಳಲ್ಲಿ ಆರ್. ಆರ್ ನಂಬರ್ ಹೊಂದಿದೇ ಇರುವ  ಕುಟುಂಬಗಳು ಜಿಲ್ಲೆಯಲ್ಲಿವೆ. ಅಂತಹವರ ಕುಟುಂಬಗಳೂ ಕೂಡ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಹೀಗಾಗಿ ಅಂತಹ ಕುಟುಂಬಗಳ ಪ್ರತ್ಯೇಕ ಪಟ್ಟಿಯನ್ನು ತಯಾರಿಸಿ, ಸದರಿ ಮನೆಗಳಿಗೂ ಸಹ ಗ್ರಾಮ ಲೆಕ್ಕಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಜಿಯೋ ಟ್ಯಾಗ್ ಮಾಡಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

    Click here

    Click here

    Click here

    Click Here

    Call us

    Call us

    ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವು , ಸೆಪ್ಟಂಬರ್ 22 ರಿಂದ   ಆರಂಭಗೊಂಡು ಅಕ್ಟೋಬರ್ 07 ರೊಳಗೆ ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಲಾಗಿದೆ.  ಸಮೀಕ್ಷಾ ಕಾರ್ಯವನ್ನು ಶಾಲಾ ಶಿಕ್ಷಕರು ಕೈಗೊಳ್ಳಲಿದ್ದು, ಸಮೀಕ್ಷೆಗಾಗಿಯೇ ವಿಶೇಷವಾದ ಆಪ್ ಅಭಿವೃದ್ಧಿಪಡಿಸಲಾಗಿದ್ದು, ಈ ಆಪ್ ಮೂಲಕವೇ ಸಮೀಕ್ಷೆ ನಡೆಸಲಾಗುವುದು ಎಂದರು.

    ಜಿಲ್ಲೆಯಲ್ಲಿನ ಒಟ್ಟು ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ, ಪ್ರತಿ ಸಮೀಕ್ಷೆದಾರರು ಕನಿಷ್ಟ 80 ರಿಂದ 100 ಮನೆಗಳಿಗೆ ಖುದ್ದು ಭೇಟಿ ಮಾಡಿ ಸಮೀಕ್ಷೆ ಮಾಡಬೇಕಾಗುತ್ತದೆ ಎಂದ ಅವರು, ರಾಜ್ಯ ಮಟ್ಟದಲ್ಲಿ ಮಾಸ್ಟರ್ ಟ್ರೈನರ್ಸ್ ಗಳ ತರಬೇತಿಯು ಇದೆ ಸೆಪ್ಟೆಂಬರ್ 8 ರಂದು ನಡೆಯಲಿದ್ದು, ಜಿಲ್ಲಾ ಮಟ್ಟದಲ್ಲಿ ಸೆಪ್ಟೆಂಬರ್ 9 -11 ರ ವರೆಗೆ ತರಬೇತಿ ಆಯೋಜಿಸಲಾಗುವುದು ಎಂದರು.

    ಜಿಲ್ಲೆಯಲ್ಲಿ ಜರುಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸಂಬಂಧ ಸರ್ಕಾರದಿಂದ ನೀಡಲಾಗುವ ಸೂಚನೆಗಳು, ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಪಾಲಿಸುವುದರೊಂದಿಗೆ ಸಮೀಕ್ಷೆ ಕಾರ್ಯವನ್ನು ಯಶಸ್ವಿ ಗೊಳಿಸಬೇಕು ಎಂದರು.

    ಸಮೀಕ್ಷೆ ಕಾರ್ಯವನ್ನು ಜಿಲ್ಲೆಯಲ್ಲಿ ಕೈಗೊಂಡಿರುವ ಬಗ್ಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ವ್ಯಾಪಕ ಪ್ರಚಾರ ನೀಡಬೇಕು ಎಂದ ಅವರು, ಸಮೀಕ್ಷೆ ಕಾರ್ಯಗಳ ಮೇಲುಸ್ತುವಾರಿ ಮಾಡಲು ಪ್ರತಿ ತಾಲೂಕಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ವಿವಿಧ ಜಿಲ್ಲಾ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    12 + six =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.