Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಬಿಲ್ಲವರ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಬಿಲ್ಲವರ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

    Updated:10/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
     ಅಸ್ಪೃಶ್ಯತೆ ಹಾಗೂ ಅಸಮಾನತೆಯ ವಿರುದ್ಧ ವಿದ್ಯೆ ಎನ್ನುವ ಅಸ್ತ್ರ ಮಾತ್ರವೇ ಸೆಟೆದು ನಿಲ್ಲಲು ಸಾಧ್ಯ ಎನ್ನುವ ಸಂದೇಶ ನೀಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಮತ ಎನ್ನುವ ಅಚಲವಾದ ತತ್ವವನ್ನು ಪ್ರತಿಪಾದಿಸಿದ್ದರು. ಅಂದು ಸಮಾಜದಲ್ಲಿ ಬೇರೂರಿದ್ದ ಅಸಮಾನತೆಯ ವಿರುದ್ಧ ಶಾಂತಿ ಮಾರ್ಗದಲ್ಲಿ ಸಾಮಾಜಿಕ ಕ್ರಾಂತಿಯನ್ನು ಮಾಡಿದ್ದರು. ಅವರ ಚಿಂತನೆಗಳು ಶೋಷಿತ ವರ್ಗಕ್ಕೆ ಭವ್ಯ ಬೆಳಕಾಗಿ ಸಾವಿರಾರು ವರ್ಷಗಳ ಕಾಲ ಧಮನಿತ ವರ್ಗದ ರಕ್ಷಾ ಕವಚವಾಗಿರುತ್ತದೆ ಎಂದು ರತನ್ ರಮೇಶ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿ ಬಿಲ್ಲವರ ಸಮಾಜ ಸೇವಾ ಸಂಘ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಪ್ರಯುಕ್ತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಗುರು ಸಂದೇಶದ ಕಾಲ್ನಡಿಗೆ ಜಾಥಾದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇದರ ಅಧ್ಯಕ್ಷ ಗೋಪಾಲ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮತ್ತು ಬೆಂಗಳೂರಿನ ಉದ್ಯಮಿ ಶಿವ ಆರ್. ಪೂಜಾರಿ ಶುಭಾ ಶಂಸನೆಗೈದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

    ತೇಜಸ್ ಪೂಜಾರಿ ಗುರುಸಂದೇಶದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೋಗಾಸನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸಂದೀಪ ಪೂಜಾರಿ ತ್ರಾಸಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಶಿವರಾಜ್ ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ, ಬಿಲ್ಲವರ ಯುವಕ ಸಂಘ ಗಂಗೊಳ್ಳಿ ಇದರ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಬಿಲ್ಲವರ ಮಹಿಳಾ ಘಟಕ ಗಂಗೊಳ್ಳಿ ಇದರ ಅಧ್ಯಕ್ಷೆ ಇಂದಿರಾ ಪೂಜಾರಿ, ಮತ್ತಿತರರು ಮೊದಲಾದವರು ಉಪಸ್ಥಿತರಿದ್ದರು.

    ಗಂಗೊಳ್ಳಿಯ ಶ್ರೀ ರಾಮ ಮಂದಿರದ ಬಳಿಯಿಂದ ಹೊರಟ ಗುರು ಸಂದೇಶದ ಕಾಲ್ನಡಿಗೆ ಜಾಥಾ ಮುಖ್ಯ ರಸ್ತೆ ಮೂಲಕ ಗಂಗೊಳ್ಳಿ ಬಂದರು ಬಸ್ ನಿಲ್ದಾಣದವರೆಗೆ ಸಾಗಿ ಎಲಿಮೆಂಟರಿ ಶಾಲೆಯಲ್ಲಿ ಸಮಾಪನಗೊಂಡಿತು.

    ಜಯಶ್ರೀ ಪೂಜಾರಿ ಸ್ವಾಗತಿಸಿದರು. ನಿಶಾ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ನಾರಾಯಣ ಪೂಜಾರಿ ವಂದಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    nineteen − sixteen =

    Call us

    Click Here

    Call us

    Call us

    Call us
    Highest Viewed Recently
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.