ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಮಧ್ವರಾಜ್ ಪ್ರಾಣಿ ಆರೈಕೆ ಟ್ರಸ್ಟ್ ಮಲ್ಪೆ, ವಲ್ಡ್ ವೈಡ್ ವೆಟರ್ನರಿ ಸರ್ವಿಸ್ ಇಂಡಿಯಾ, ಪ್ರೊಡೊ ಫೌಂಡೇಷನ್, ರೋಟರಿ ಕ್ಲಬ್ ಹಾಗೂ ಇನ್ನರ್‌ವೀಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಸೆ.10ರಿಂದ 14ರ ತನಕ ದಿನಗಳ ಕಾಲ ನಡೆಯುವ ದೇಶಿ ತಳಿಯ ಸಾಕು ನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸಾ ಉಚಿತ ಶಿಬಿರಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಶಿಬಿರಕ್ಕೆ ಚಾಲನೆ ನೀಡಿದ ನಿವೃತ್ತ ಪಶು ವೈದ್ಯಾಧಿಕಾರಿ ಡಾ.ಶಂಕರ ಶೆಟ್ಟಿ, ದೇಶಿ ತಳಿಯ ಸಾಕು ನಾಯಿಗಳು ಆರೋಗ್ಯ ಕಳೆದುಕೊಳ್ಳುತ್ತಿರುವ ಈ ದಿನಗಳಲ್ಲಿ ಇಂತಹ ಶಿಬಿರ ಆಯೋಜಿಸುತ್ತಿರುವುದು ಮಾದರಿಯಾಗಿದೆ’ ಎಂದರು.

ರೋಟರಿ ಕ್ಲಬ್ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಗವರ್ನರ್ ಐ. ನಾರಾಯಣ್, ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಕೆ, ಚೈತ್ರಾ ಯಡ್ತರೆ, ಪಟ್ಟಣ ಪಂಚಾಯಿತಿಯ ಸಂತೋಷ್, ರವಿರಾಜ್, ವಲ್ಡ್ ವೈಡ್ ವೆಟರ್ನರಿ ಸರ್ವಿಸ್ ಇಂಡಿಯಾದ ಡಾ.ಚೇತನ್, ಡಾ.ಪ್ರದೀಪ್, ಪ್ರೋಡೊ ಫೌಂಡೇಷನ್‌ನ ಶ್ವೇತಾ ಆರ್, ತೇಜಸ್ವಿನಿ, ಮುಂಜೂಷಾ, ನಿರ್ಮಲಾ ಉಪಸ್ಥಿತರಿದ್ದರು.
ಪ್ರೋಡೊ ಫೌಂಡೇಷನ್ ಮುಖ್ಯಸ್ಥ ತಾಜ್ ಸ್ವಾಗತಿಸಿದರು. ಪ್ರಿಯಾಂಕ ಜೆನಾ ತಾಜ್’ ಪ್ರಾಸ್ತಾವಿಕ ವಾಗಿ ಮಾತನಾಡಿದರು. 5 ದಿನಗಳು ನಡೆಯುವ ಈ ಶಿಬಿರದಲ್ಲಿ ನಾಯಿಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, 150 ನಾಯಿಗಳಿಗೆ ಉಚಿತವಾಗಿ ಸಂತಾನಶಕ್ತಿ ಹರಣ ಚಿಕಿತ್ಸೆ, ಲಸಿಕೆ ಸೌಲಭ್ಯ ಒದಗಿಸಲಾಗುತ್ತಿದೆ.










