ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಡುಪಿ ಜಿಲ್ಲೆ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಮತ್ತು ಎಸ್. ವಿ. ಹಳೆ ವಿದ್ಯಾರ್ಥಿಗಳ ಸಂಘ ಟ್ರಸ್ಟ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ನಾಲ್ಕು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
ಬಾಲಕರ ಬಾಲ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಟೆನ್ನಿಕಾಯ್ಟ್ ವಿಭಾಗದಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕರ ಟೆನಿಕಾಯ್ಟ್ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.










