Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾನವಿಯತೆಯ ಸದಾಶಯವನ್ನು ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ: ಸಂಸದ ಕೋಟ
    ಊರ್ಮನೆ ಸಮಾಚಾರ

    ಮಾನವಿಯತೆಯ ಸದಾಶಯವನ್ನು ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬ್ರಹ್ಮಶ್ರೀ ನಾರಾಯಣ ಗುರುಗಳು ಯಾವುದೇ ಪ್ರತ್ಯೇಕ ಧರ್ಮಕ್ಕೆ ಮಾತ್ರ ಸೀಮಿತವಾದ ಯುಗ ಪುರುಷರಾಗದೆ ಎಲ್ಲಾ ಜಾತಿ ಧರ್ಮದ ನಾಯಕರಾಗಿದ್ದು ಎಲ್ಲರ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದರು. ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು  ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಆದರ್ಶ ಪೂರ್ಣವಾದದ್ದು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಕುಂದಾಪುರ ಮಂಡಲ ಇವರ ವತಿಯಿಂದ ಆಯೋಜಿಸಲಾದ ಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ರಾಣಿ ಅಬ್ಬಕ್ಕ ಜಯಂತಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಲ್ಲರಲ್ಲೂ ಮಾನವೀಯತೆಯ ಸದಾಶಯವನ್ನ ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ ಎಂದು ನುಡಿದ ಅವರು ರಾಣಿ ಅಬ್ಬಕ್ಕರ ಹೋರಾಟದ ರೂಪುರೇಷೆಗಳ ಬಗ್ಗೆ ಸಮಗ್ರ ವಿಚಾರಧಾರೆಗಳನ್ನು ಹಂಚಿಕೊಂಡರು.

    ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ಮಾತನಾಡಿ, ನಾರಾಯಣ ಗುರುಗಳು ಕೇವಲ ಒಂದು ಸಮಾಜಕ್ಕೆ ಮಾತ್ರವಲ್ಲ, ಇಡೀ ಸಮುದಾಯಕ್ಕೆ ಗುರುಗಳು. ಸಂವಿಧಾನ ಹಾಗೂ ಸರಕಾರ ನೀಡಿರುವ ಅವಕಾಶಗಳನ್ನು ಬಳಸಿಕೊಂಡು, ಸಮಾಜದ  ಎಲ್ಲರೂ ವೈಯಕ್ತಿಕ ಕೊಡುಗೆ ನೀಡಬೇಕು ಎಂದರು.

     ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ವಹಿಸಿದರು.

    ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ನಾರಾಯಣ ಗುರುಗಳ ಹಾಗೂ ರಾಣಿ ಅಬ್ಬಕ್ಕರ ಅವರ ಕಾರ್ಯಕ್ರಮಕ್ಕೆ ಶುಭನುಡಿಗಳ ನಾಡಿದರು.

    Click here

    Click here

    Click here

    Click Here

    Call us

    Call us

    ಸದ್ರಿ ಕಾರ್ಯಕ್ರಮದ ವೇದಿಕೆಯಲ್ಲಿ  ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ ಸುಧೀರ್ ಕೆ.ಎಸ್. ಜಿಲ್ಲಾ ಓ.ಬಿ.ಸಿ. ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ಮಂಡಲ ಓಬಿಸಿ ಮೋರ್ಚ ಪ್ರಭಾರಿ ಚಂದ್ರಜೋಗಿ, ಜಿಲ್ಲಾ ಓಬಿಸಿ ಕಾರ್ಯದರ್ಶಿ ಸಂತೋಷ್ ಪೂಜಾರಿ ತೆಕ್ಕಟ್ಟೆ, ಕುಂದಾಪುರ ಓಬಿಸಿ ಮೋರ್ಚದ ಸರ್ವ ಪದಾಧಿಕಾರಿಗಳು  ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ವಿವಿಧ ಜವಾಬ್ದಾರಿಯ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು

    ಕಾರ್ಯಕ್ರಮವನ್ನ ಕುಂದಾಪುರ ಮಂಡಲ ಓಬಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್ಯ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    sixteen + thirteen =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.