ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಬೆಂಗಳೂರು ಮಹಾ ನಗರ ಪಾಲಿಕೆ, ಮೈ ಭಾರತ ದಕ್ಷಿಣ ಕನ್ನಡ ಜಿಲ್ಲಾ ಯುವ ಜನ ಒಕ್ಕೂಟ ರಿ. ಹಾಗೂ ವಿವಿಧ ಸಂಘ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸನ್ವಿತ್ ಜಿ. ಖಾರ್ವಿ ಕಂಚಿನ ಪದಕ ಪಡೆದು ಸಾಧನೆ ಮೆರೆದಿದ್ದಾನೆ.
ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋದಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.










