ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಯುನಿವರ್ಸಲ್ ಸ್ಕೂಲ್ ಆಫ್a ಎಡ್ಮಿನಿಸ್ಟ್ರೇಶನ್ ಸಂಸ್ಥೆಯ ಉಪನ್ಯಾಸಕರಾದ ಶ್ರೀ ಪ್ರಭುಲಿಂಗ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಆಡಳಿತಾತ್ಮಕ ಕಛೇರಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವ ಬಗ್ಗೆ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ. ಅವರು ಧನ್ಯವಾದ ಸಲ್ಲಿಸಿದರು.










