ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ವಾರ್ಷಿಕ ಶರನ್ನವರಾತ್ರಿ ಉತ್ಸವದ ಮೂರನೆ ದಿನದ ಅಂಗವಾಗಿ ಚಂಡಿಕಾ ಸಪ್ತಸತಿ ಪಾರಾಯಣ, ದುರ್ಗಾಹೋಮ ಕಾರ್ಯಕ್ರಮಗಳು ಸೇವಾಕರ್ತರಾದ ಉದ್ಯಮಿ ಮಹೇಶ್ ಶೆಟ್ಟಿ ಗುಳ್ಳಾಡಿ ದಂಪತಿಗಳು ಭಾಗಿಯಾಗುವ ಮೂಲಕ ನೆರವೇರಿತು.
ಧಾರ್ಮಿಕ ಕೈಂಕರ್ಯವನ್ನು ವೇ. ಮೂ ಮಧುಸೂದನ ಬಾಯರಿ ನೇತೃತ್ವದಲ್ಲಿ ಜರಗಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ ಆನಂದ್ ಸಿ. ಕುಂದರ್ ಸೇವಾಕರ್ತ ಕುಟುಂಬಕ್ಕೆ ಪ್ರಸಾದ ವಿತರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ದೇಗುದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಸುಧಾ ಎ. ಪೂಜಾರಿ, ಜ್ಯೋತಿ ಡಿ.ಕಾಂಚನ್, ಶಿವ ಪೂಜಾರಿ, ರತನ್ ಐತಾಳ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿಗಳಾದ ಸುಂದರ್, ಚಂದ್ರ ಪೂಜಾರಿ, ಕೋಟ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಅಮೃತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.










