Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಪ್ರೇಕ್ಷಣೀಯ ಸ್ಥಳಗಳ ಸ್ವಚ್ಛತಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಪ್ರೇಕ್ಷಣೀಯ ಸ್ಥಳಗಳ ಸ್ವಚ್ಛತಾ ಕಾರ್ಯಕ್ರಮ

    Updated:09/10/2025No Comments
    Facebook Twitter Pinterest LinkedIn WhatsApp Reddit Tumblr Email
    default
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಕಾರ್ಕಳದ ಆಸುಪಾಸಿನಲ್ಲಿರುವ ಅನೇಕ ಪ್ರೇಕ್ಷಣೀಯ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು.

    Click Here

    Call us

    Click Here

    ಪ್ಲಾಸ್ಟಿಕ್ ಕಸದ ಸಂಗ್ರಹ, ಕಸ ವಿಂಗಡಣೆ ಹಾಗೂ ಪರಿಸರ ಶುದ್ಧೀಕರಣದ ಜೊತೆಗೆ ಸ್ಥಳೀಯ ಜನರಿಗೆ ಸ್ವಚ್ಛತೆಯ ಮಹತ್ವವನ್ನು ಬೋಧಿಸುವ ಜಾಗೃತಿ ಅಭಿಯಾನವೂ ನಡೆಯಿತು.

    ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ವಚ್ಛ ಕಾರ್ಕಳ ನಗರದ ಸ್ವಚ್ಛತಾ ರಾಯಭಾರಿಯಾಗಿರುವ ಫೆಲಿಕ್ಸ್ ಜೋಸೆಫ್ ವಾಜ್ ಅವರು ಶುಭ ಹಾರೈಸಿದರು.

    ಕಾರ್ಕಳ ಪುರಸಭಾ ಅಧ್ಯಕ್ಷರಾದ ಯೋಗೀಶ್ ದೇವಾಡಿಗ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ‘ ಸ್ವಚ್ಛತೆ ಎನ್ನುವುದು ಕೇವಲ ದೈಹಿಕ ಶುದ್ಧತೆಗೆ ಸೀಮಿತವಲ್ಲ. ನಮ್ಮ ಮನಸ್ಸಿನ, ಸಮಾಜದ ಮತ್ತು ಸಂಸ್ಕೃತಿಯ ಶುದ್ಧತೆಯ  ಪ್ರತೀಕವೂ ಹೌದು. ಯುವಕರು ಇಂತಹ ಚಟುವಟಿಕೆಗಳ ಮೂಲಕ ಸಾಮಾಜಿಕ ಬದಲಾವಣೆಗೆ ಪ್ರೇರಣೆಯಾಗುತ್ತಾರೆʼ ಎಂದು ಹೇಳಿದರು.

    ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ. ಗಣನಾಥ ಶೆಟ್ಟಿ ಅವರು ಮಾತನಾಡಿ, ‘ಸ್ವಚ್ಛತೆಯು ಕೇವಲ ಕಾರ್ಯವಲ್ಲ. ಅದು ಜೀವನಶೈಲಿ ಆಗಬೇಕು. ಯುವಕರು ಇಂತಹ ಸಾಮಾಜಿಕ ಜವಾಬ್ದಾರಿಗಳಲ್ಲಿ ತೊಡಗಿದಾಗ ಸಮಾಜದ ಬೆಳವಣಿಗೆ ಖಚಿತ’ ಎಂದು ತಿಳಿಸಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಲ್ಲಿ ಓರ್ವರಾದ ಅಶ್ವತ್ ಎಸ್.ಎಲ್, ಎನ್.ಎಸ್.ಎಸ್ ಶಿಬಿರಾಧಿಕಾರಿ ಉಮೇಶ್, ಉಪನ್ಯಾಸಕ – ಉಪನ್ಯಾಸಕೇತರ ವರ್ಗದವರು, ಸುಮಾರು 150ಕ್ಕಿಂತಲೂ ಹೆಚ್ಚು ವಿದ್ಯಾರ್ಥಿ – ವಿದ್ಯಾರ್ಥಿನಿಯರು ಪಾಲ್ಗೊಂಡು, ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಿದರು. ಈ ಸ್ವಚ್ಛತಾ ಆಂದೋಲನಕ್ಕೆ ಕಾರ್ಕಳ ಪುರಸಭೆಯ ಸಂಪೂರ್ಣ ಸಹಕಾರ ದೊರಕಿತು.

    ಸಭಾ ಕಾರ್ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕರಾದ ಲೋಹಿತ್ ಎಸ್.ಕೆ. ಅವರು ನಿರೂಪಿಸಿ, ವಂದಿಸಿದರು. ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ಭಾಗವಹಿಸಿದ ಎಲ್ಲರನ್ನು ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    three + eighteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.