ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸನಾತನ ಧರ್ಮವನ್ನು ಹೊಂದಿದ ಭಾರತೀಯರಿಗೆ ಸಂಸ್ಕೃತಿಯ ಬೇರು ಗಟ್ಟಿಯಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು, ಮಾನವ ಧರ್ಮವನ್ನು ಅರ್ಥೈಸಿಕೊಳ್ಳುವ ಮೂಲಕ ಜೀವನದ ಅರ್ಥವನ್ನು ತಿಳಿಯಬಹುದು ಎಂದು ಉಡುಪಿಯ ಉಜ್ವಲ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ಶಯನ ಅತಿಥಿಗಳನ್ನು ಪರಿಚಯಿಸಿದರು. ಅಭಿಷೇಕ್ ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಮಿಥಿಲೇಶ್ ನಿರೂಪಿಸಿ, ರೇಷ್ಮಾ ಸ್ವಾಗತಿಸಿ, ಮೇಘನಾ ವಂದಿಸಿದರು.















