Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ವಿದ್ಯಾಸಂಸ್ಥೆಯಲ್ಲಿ ಬೆಳಕಿನ ಹಬ್ಬದ ಸಂಭ್ರಮ
    Uncategorized

    ಸುಜ್ಞಾನ ವಿದ್ಯಾಸಂಸ್ಥೆಯಲ್ಲಿ ಬೆಳಕಿನ ಹಬ್ಬದ ಸಂಭ್ರಮ

    Updated:25/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಯಡಾಡಿ-ಮತ್ಯಾಡಿಯಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಬುಧವಾರ ಹಾಸ್ಟೆಲ್ ಮಕ್ಕಳಿಗಾಗಿ ದೀಪಾವಳಿಯನ್ನು ಬಹಳ ಅದ್ಧೂರಿಯಾಗಿ ಹಾಗೂ ಶಾಸ್ತ್ರೋಕ್ತಬದ್ಧವಾಗಿ ಆಚರಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕಲಾಮಾಧ್ಯಮ ಯೂಟ್ಯೂಬ್ ಚಾನೆಲ್‌ನ ಪರಮೇಶ್ವರ್ ಮಾತನಾಡಿ “ಅಕ್ಷರವೆನ್ನುವುದು ದೀಪವಿದ್ದಂತೆ. ಈ ಅಕ್ಷರವೆನ್ನುವ ಜ್ಞಾನದ ಬೆಳಕನ್ನು ಸುಜ್ಞಾನ ಕಾಲೇಜು ಮಕ್ಕಳ ಮನಸ್ಸಿನಲ್ಲಿ ಪಸರಿಸುತ್ತಿದೆ. ಸುಜ್ಞಾನ ಸಂಸ್ಥೆಯು ಉತ್ತಮ ಶಿಕ್ಷಣವನ್ನು ನೀಡುತ್ತಾ ಮಕ್ಕಳ ಮನಸ್ಸಿನಲ್ಲಿ ಸದ್ವಿಚಾರಗಳನ್ನು ಬಿತ್ತುತ್ತಿದೆ ಎಂದರು.

    ಅತಿಥಿಯಾಗಿದ್ದ ಉದ್ಯಮಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಮಾತನಾಡಿ, “ವಿದ್ಯೆ ಕಲಿಸಿದ ಗುರು ಹಾಗೂ ಜನ್ಮ ನೀಡಿದವರನ್ನು ಎಂದಿಗೂ ಮರೆಯಬಾರದು. ಹಾಗೆಯೇ, ಕೀಳರಿಮೆಯನ್ನಾಗಲಿ ಇಲ್ಲವೆ ಅತಿಯಾದ ಆತ್ಮವಿಶ್ವಾಸವನ್ನಾಗಲಿ ಬೆಳೆಸಿಕೊಳ್ಳಬಾರದು. ಮಾನವೀಯ ಮೌಲ್ಯಗಳ ಪಾಲನೆಗೆ ಬದ್ಧವಾಗಿರುವುದು ಮುಖ್ಯ” ಎಂದರು.

    ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಮಾತನಾಡಿ, “ಮಕ್ಕಳಿಗೆ ಸಹಾಯವಾಗಲೆಂದು ಇಂತಹ ಕಾರ್ಯಕ್ರಮಗಳನ್ನುಸಂಸ್ಥೆಯು ನಿರಂತರವಾಗಿ ಆಯೋಜಿಸುತ್ತಾ ಬಂದಿದೆ. ಈ ಕಾರ್ಯಕ್ರಮಗಳು ಮಕ್ಕಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಹಬ್ಬದ ಆಚರಣೆಗಳ ಬಗ್ಗೆ ಅರಿವು ಮೂಡಿಸುವುದರಿಂದ ಮಕ್ಕಳಿಗೆ ನಮ್ಮ ಪರಂಪರೆಯ ಬಗ್ಗೆ ಗೌರವ ಹೆಚ್ಚುತ್ತದೆ. ಜೊತೆಗೆ, ಅವರ ಸರ್ವತೋಮುಖ ಬೆಳವಣಿಗೆಗೆ ಇಂಬು ನೀಡುತ್ತದೆ” ಎಂದರು.

    ಖಜಾಂಚಿ ಭರತ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ದೀಪಾವಳಿ ಎಂದರೆ ನಮ್ಮ ಸಂಸ್ಕೃತಿ, ಇತಿಹಾಸವನ್ನು ಸಾರುವ ಹಬ್ಬವಾಗಿದೆ. ಹಾಸ್ಟೆಲ್ ನಲ್ಲಿರುವ ಮಕ್ಕಳಿಗೆ ಹಬ್ಬಗಳು ಹಾಗೂ ಅವುಗಳ ಆಚರಣೆಗಳ ಬಗ್ಗೆ ಅರಿವು ಮೂಡಿಸಲು ಸಂಸ್ಥೆಯು ಪ್ರತಿಯೊಂದು ಹಬ್ಬ ಆಚರಣೆಗೂ ಒತ್ತು ನೀಡುತ್ತಿದೆ. ಇದರಿಂದ ಮಕ್ಕಳಿಗೆ ನಮ್ಮ ಸಂಪ್ರದಾಯದ ತಿಳಿಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಸನಾತನ ಧರ್ಮದ ಪ್ರತಿಯೊಂದು ಹಬ್ಬವೂ ಒಂದೊಂದು ಸಂದೇಶ ನೀಡುತ್ತದೆ. ವಿದ್ಯಾರ್ಥಿಗಳು ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ವಿಷಯಗಳನ್ನು ಮೈಗೂಡಿಸಿಕೊಳ್ಳಬೇಕು. ಓದುವುದರ ಕಡೆ ಹೆಚ್ಚು ಗಮನ ಹರಿಸಬೇಕು” ಎಂದರು.

    ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಪ್ರತಿಯೊಂದು ಪದ್ಧತಿ, ರೀತಿ ರಿವಾಜುಗಳನ್ನು ಆಚರಿಸಲಾಯಿತು. ಗದ್ದೆಗೆ ಹಿಟ್ಟು ಬಡಿಸುವುದರಿಂದ ಹಿಡಿದು, ಬಲೀಂದ್ರ ಕರೆಯುವುದು, ತುಳಸಿಕಟ್ಟೆ ಪೂಜೆ, ಗೋಪೂಜೆಗಳನ್ನು ಬಹಳ ಅದ್ಭುತವಾಗಿ ಮಾಡಲಾಯಿತು. ಇದರ ಜೊತೆಗೆ ಪ್ರಾಚೀನ ವಸ್ತುಗಳ ಪ್ರದರ್ಶನ ಕೂಡ ಗಮನ ಸೆಳೆದಿತ್ತು. ಇದರಲ್ಲಿ ಕೃಷಿ ಚಟುವಟಿಕೆಯಲ್ಲಿ ಬಳಸಲಾಗುವ ಪರಿಕರಗಳಿಗೆ ಪೂಜೆ ಸಲ್ಲಿಸಲಾಯಿತು.

    ಬಳಿಕ ಅರೆಹೊಳೆ ನಂದಗೋಕುಲ ಕಲಾವಿದರು ಪ್ರಸ್ತುತಪಡಿಸಿದ ʼಬಿಡುವನೆ ಬ್ರಹ್ಮಲಿಂಗʼ ನೃತ್ಯ ಪ್ರದರ್ಶನ ಎಲ್ಲರ ಕಣ್ಮನ ಸೆಳೆಯಿತು. ಮಕ್ಕಳಿಗೆ ಹಬ್ಬದ ಆಚರಣೆಯನ್ನು ತಿಳಿಸಿಕೊಡುವುದರ ಜೊತೆಗೆ ಹಬ್ಬದೂಟವನ್ನೂ ಅದ್ಧೂರಿಯಾಗಿ ಮಾಡಿ ಮಕ್ಕಳು ಹಾಗೂ ಪೋಷಕರ ಬಾಯಿಗೆ ಸಿಹಿ ಉಣಬಡಿಸಲಾಯಿತು.

    ಈ ವೇಳೆ ಚಿಂತಕ ಪಡುಕರೆ ಉದಯ ಶೆಟ್ಟಿ, ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿ.ಅರುಣ್ ಕುಮಾರ್ ಹೆಗ್ಡೆ, ವಿದ್ಯಾರಣ್ಯದ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ, ಮುಖ್ಯೋಪಾಧ್ಯಾಯ ಪ್ರದೀಪ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಕೃತ ಶಿಕ್ಷಕಿ ಸುದಕ್ಷಿಣ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    fifteen − fourteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.