ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿ ಅವರು ಆಯೋಜಿಸಿದ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರದಂದು ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ, ಜಾನಪದ ಅಧ್ಯಯನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2025ರ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ಸರ್ಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳಕರ್ ಹಾಗೂ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿಯ ಅಧ್ಯಕ್ಷರು, ಜಿಲ್ಲಾಧಿಕಾರಿಗಳಾಗಿರುವ ಸ್ವರೂಪಾ ಟಿ.ಕೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಯಶ್‌ಪಾಲ್ ಸುವರ್ಣ ವಹಿಸಿದ್ದರು.
ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಮಂಡಳಿ ಮಂಗಳೂರು ಇದರ ಅಧ್ಯಕ್ಷರಾದ ಎಂ.ಎ ಗಪೂರ್, ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಶೋಕ್ ಕೊಡವೂರು, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ ಶಂಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.















